ಶುಕ್ರವಾರ, ಮೇ 7, 2021
27 °C

ಗುಡಿಬಂಡೆ: ಪಂಚಾಯತಿ ನೌಕರರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಡಿಬಂಡೆ: ಕನಿಷ್ಠ ವೇತನ ನೀತಿ, ಅನುದಾನದ ಹೆಚ್ಚಳ, ಮುಂಬಡ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯ್ತಿ ನೌಕರರ ಸಂಘ, ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ನೌಕರರು ಗುರುವಾರ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ತಾ.ಪಂ. ಕಚೇರಿ ಆವರಣದಲ್ಲಿ ಅನಿರ್ದಿಷ್ಟ ಕಾಲ ಧರಣಿ ಆರಂಭಿಸಿದರು. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಯಾವುದೇ ಮೂಲಸೌಕರ್ಯಗಳಿಲ್ಲದೆ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತಳಮಟ್ಟದ ನೌಕರರಿಗೆ ಕಡಿಮೆ ವೇತನ ನೀಡುವ ಮೂಲಕ ಸರ್ಕಾರಗಳು ದಬ್ಬಾಳಿಕೆ ಮಾಡುತ್ತಿವೆ. ಆದ್ದರಿಂದ, ಕನಿಷ್ಠ ವೇತನ ನೀತಿ ಕೂಡಲೇ ಜಾರಿಯಾಗಬೇಕು ಹಾಗೂ ಸಂಘದ 8 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು, ಅಲ್ಲಿಯವರೆಗೆ ಮುಷ್ಕರ ಕೈಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಪ್ರತಿಭಟನೆ ನೇತೃತ್ವವನ್ನು ಗ್ರಾ.ಪಂ. ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿದ್ದಗಂಗಪ್ಪ, ಜಿಲ್ಲಾ ಕಾರ್ಯದರ್ಶಿ ಮುನಿಕೃಷ್ಣಪ್ಪ, ಸಿಐಟಿಯು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಎಸ್‌ಎಫ್‌ಐ ಮುಖಂಡ ಶಿವಪ್ಪ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಿರೆಡ್ಡಿ, ಗ್ರಾ.ಪಂ. ಸಂಘದ ತಾಲ್ಲೂಕು ಅಧ್ಯಕ್ಷ ಗೋವಿಂದ ರೆಡ್ಡಿ, ಕಾರ್ಯದರ್ಶಿ ಅಶೋಕ್, ಖಚಾಂಚಿ ನಾರಾಯಣಸ್ವಾಮಿ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.