ಶುಕ್ರವಾರ, ಮೇ 14, 2021
32 °C

ಗುಡಿಸಲು ರಹಿತ ಕ್ಷೇತ್ರ: ಅನಿತಾ ಕುಮಾರ ಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಕ್ಷೇತ್ರವನ್ನು ಗುಡಿಸಲು ರಹಿತ ಮಾದರಿ ಕ್ಷೇತ್ರವಾಗಿ ರೂಪಿಸಲು ಶ್ರಮಿಸಲಾಗುತ್ತಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತಿಳಿಸಿದರು.ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ಅಣ್ಣೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಅಣ್ಣೇನಹಳ್ಳಿ, ಸಿಂಗನಹಳ್ಳಿ, ತೆರಿಯೂರು, ಕಡಗತ್ತೂರು, ಗುಂಡಗಲ್ಲು, ಮುದ್ದೇನಹಳ್ಳಿ, ಪರ್ತಿಹಳ್ಳಿ, ಮೊಸರಪಡಿ, ಟಿ.ಡಿ.ಹಳ್ಳಿ, ಕಸಿನಾಯಕನಹಳ್ಳಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ಏರ್ಪಡಿಸಲಾಗಿದ್ದ ಹೈನುಗಾರಿಕೆ ವಿಚಾರ ಸಂಕಿರಣ, ಮಿಶ್ರತಳಿ ಹಸುಕರುಗಳ ಪ್ರದರ್ಶನ ಹಾಗೂ ಅಣ್ಣೇನಹಳ್ಳಿ ಮತ್ತು ತಿಪ್ಪಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕ್ಷೇತ್ರದ ಪ್ರತಿಯೊಬ್ಬರಿಗೂ ಸ್ವಂತ ಮನೆ ನಿರ್ಮಿಸಿಕೊಡುವ ಆಶಾಭಾವನೆ ಹೊಂದಿದ್ದೇನೆ ಎಂದರು.ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಮತ್ತು ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ಮತ್ತು ಯಾವುದೇ ಗ್ರಾಮದಲ್ಲಿ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು. ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷ ಹಳೆಮನೆ ಶಿವನಂಜಪ್ಪ ಸಮಾರಂಭ ಉದ್ಘಾಟಿಸಿದರು. ನಿರ್ದೇಶಕ ಬಿ.ನಾಗೇಶ್‌ಬಾಬು ಅಧ್ಯಕ್ಷತೆ ವಹಿಸಿದ್ದರು.ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಜೆ.ರಾಜಣ್ಣ ಮಾತನಾಡಿದರು. ಸಿಂಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಮಲಮ್ಮ ನಾಗರಾಜು, ತಾಲ್ಲೂಕು ಜೆಡಿಎಸ್ ಕಾರ್ಯದರ್ಶಿ ಸುಕನ್ಯಾ, ಮುಖಂಡರಾದ ಬಿ.ವಿ.ನಾಗರಾಜು, ಎಚ್.ಎಂ.ಹನುಮಂತರಾಯಪ್ಪ ಇತರಿರದ್ದರು.ಪಶುವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಂಜೀವರಾಯ ಸ್ವಾಗತಿಸಿದರು. ರಾಮಕೃಷ್ಣಯ್ಯ ನಿರೂಪಿಸಿ, ವಂದಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.