`ಗುಣಮಟ್ಟದ ಶಿಕ್ಷಣಕ್ಕಾಗಿ ಶ್ರಮವಹಿಸಿ'

7

`ಗುಣಮಟ್ಟದ ಶಿಕ್ಷಣಕ್ಕಾಗಿ ಶ್ರಮವಹಿಸಿ'

Published:
Updated:

ಹೊಸಕೋಟೆ: `ಶಿಕ್ಷಕರು ಆದರ್ಶಪ್ರಾಯರಾಗಿ ಜವಾಬ್ದಾರಿ ಅರಿತು ಮಕ್ಕಳಿಗೆ ಚಾರಿತ್ರ್ಯದಿಂದ ಕೂಡಿದ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುವುದರ ಮೂಲಕ ಸುಸಂಸ್ಕೃತ ವಿದ್ಯಾರ್ಥಿಗಳನ್ನು ರೂಪಿಸಬೇಕು' ಎಂದು ಬೆಂಗಳೂರು ರಾಮಕೃಷ್ಣ ಆಶ್ರಮದ ಸ್ವಾಮಿ ಮಂಗಳನಾಥನಂದಜೀ ಸಲಹೆ ನೀಡಿದರು.ಹೊಸಕೋಟೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎನ್.ನಾಗರಾಜು, `ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಾವಿರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಶಿಕ್ಷಕರು ಇದನ್ನರಿತು ಗುಣಮಟ್ಟದ ಶಿಕ್ಷಣ ನೀಡಲು ಶ್ರಮ ವಹಿಸಬೇಕು. ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಕ್ರಮ ಕೈಗೊಂಡಿದೆ' ಎಂದರು.ತಹಶೀಲ್ದಾರ್ ಕುಮಾರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ. ಬಸವರಾಜೇಗೌಡ, ತಾ. ಪಂ. ಸದಸ್ಯೆ ಕಮಲಾಕ್ಷಿ ಉಪಸ್ಥಿತರಿದ್ದರು. ಇದೇ ವೇಳೆ ತಾಲ್ಲೂಕಿನ ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry