ಮಂಗಳವಾರ, ಏಪ್ರಿಲ್ 20, 2021
24 °C

ಗುಣಮಟ್ಟದ ಶಿಕ್ಷಣಕ್ಕೆ ಆಧುನಿಕ ತಂತ್ರಜ್ಞಾನದ ಅಳವಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಬದಲಾದ ಸನ್ನಿವೇಶಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಣದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.ಪಟ್ಟಣದ ಭಾರತ್‌ಮಾತಾ ಶಾಲೆಯ ನೂತನ ಕೊಠಡಿ ಹಾಗು ಸ್ಮಾರ್ಟ್‌ಕ್ಲಾಸ್ ತರಗತಿಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲೇ ಪ್ರಥಮವಾಗಿ ಮಕ್ಕಳಿಗೆ ದೃಶ್ಯಮಾಧ್ಯಮದ ಮೂಲಕ ಈ ಶಾಲೆ ಶಿಕ್ಷಣ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ಇರಲು ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ, ಜಿ.ಪಂ.ಮಾಜಿ ಅಧ್ಯಕ್ಷ ಸಿ.ಮುನಿಯಪ್ಪ, ಭಾರತೀಯ ಖಗೋಳ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಬಿ.ಸಿ.ಭಟ್, ಡಾ.ಮೃತ್ಯುಂಜಯ, ಮಾತನಾಡಿದರು.ಶಾಲೆಯ ಮುಖ್ಯಸ್ಥರಾದ ಎಚ್.ಎನ್.ಕೃಷ್ಣಮೂರ್ತಿ, ಎಚ್.ವೈ.ಗೌರಮ್ಮ, ಕನ್ನಡ ಸಂಘದ ಅಧ್ಯಕ್ಷ ಹೋ.ರಾ.ವೆಂಕಟೇಶ್, ಎ.ಮಂಜುನಾಥ್ ಮತ್ತಿತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.