ಶುಕ್ರವಾರ, ಮೇ 27, 2022
27 °C

ಗುಣಾತ್ಮಕ ಶಿಕ್ಷಣ: ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಹ್ಮಾವರ: ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಆಂಗ್ಲ ಭಾಷೆಯ ವ್ಯಾಮೋಹದ ಕಾರಣ ಕನ್ನಡ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕುಸಿಯುತ್ತಿದೆ. ಆದರೆ ಗುಣಾತ್ಮಕ ಶಿಕ್ಷಣ ದೊರೆಯುವಲ್ಲಿ ಮಕ್ಕಳ ಸಂಖ್ಯೆ ಇನ್ನೂ ಕುಸಿದಿಲ್ಲ ಎಂದು ಚೇರ್ಕಾಡಿ ಕ್ಲಸ್ಟರ್‌ನ ಸಿ.ಆರ್.ಪಿ ರೂಬಿ ಪಿಂಟೋ ಹೇಳಿದರು.ಆರೂರು ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಪುಸ್ತಕ ವಿತರಣಾ ಸಮಾರಂಭದಲ್ಲಿ ಕುಡುರ್ಂಜೆ ಬಾಲಕೃಷ್ಣ ಶೆಟ್ಟಿ ಅವರು ನೀಡಿದ ನೋಟ್ ಪುಸ್ತಕ ಮತ್ತು ಪಠ್ಯ ಪುಸ್ತಕ ವಿತರಿಸಿ ಅವರು ಮಾತನಾಡಿದರು.ಗುಣಾತ್ಮಕ ಶಿಕ್ಷಣ ನೀಡದಿದ್ದರೂ, ಇಂದು ಕೆಲವು ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಮತ್ತು ಮಕ್ಕಳಿಗೆ ಹಲವು ಆಮಿಷ ನೀಡಿ ಶಿಕ್ಷಣದ ವ್ಯವಸ್ಥೆಯನ್ನು ಹಾಳು ಮಾಡಿವೆ. ಇದಕ್ಕೆ ಮರುಳಾಗದೇ ಗುಣಾತ್ಮಕ ಶಿಕ್ಷಣ ಎಲ್ಲಿ ದೊರೆಯುತ್ತದೆಯೋ, ಅಲ್ಲಿಗೆ ಮಕ್ಕಳನ್ನು ಕಳುಹಿಸುವಂತೆ ಅವರು ಪೋಷಕರಿಗೆ ಸಲಹೆ ನೀಡಿದರು.ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಅಧಿಕಾರಿ ಎ.ಹೆಬ್ಬಾರ್ ಮಾತನಾಡಿ `ಯುದ್ಧವೆಂಬ ಅಜ್ಞಾನವನ್ನು ಹೋಗಲಾಡಿಸುವ ಗುರು ಹಿರಿಯರ ಬಗ್ಗೆ ಗೌರವವನ್ನು ಇಟ್ಟುಕೊಳ್ಳುವಂತೆ ಮಕ್ಕಳಿಗೆ ಕಿವಿ ಮಾತು ಹೇಳಿದರು.

ಕುಂಜಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುರ್ಡುಂಜೆ ರಘುರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಶಾಲೆಯ ಸಂಚಾಲಕ ಎ.ಎಂ.ಮೋಹನ್ ರಾವ್, ಸಮನ್ವಯ ಶಿಕ್ಷಣಾಧಿಕಾರಿ ರಾಜಶೇಖರ್ ಶೆಟ್ಟಿ, ಶಾಲೆಯ ಅಧ್ಯಾಪಕ ಸತೀಶ್ ಶೆಟ್ಟಿ, ಗೌರವ ಶಿಕ್ಷಕಿಯರಾದ ಸುಪ್ರಿತಾ, ರೇಣುಕಾ, ದಿವ್ಯಾ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ಎ.ಎಂ.ಪದ್ಮನಾಭ ರಾವ್ ಸ್ವಾಗತಿಸಿದರು. ಅಧ್ಯಾಪಕ ಸಂದೀಪ್ ಶೆಟ್ಟಿ ನಿರೂಪಿಸಿ ವಂದಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.