ಗುತ್ತಿಗೆದಾರನ ಮೇಲೆ ಹಲ್ಲೆ

7

ಗುತ್ತಿಗೆದಾರನ ಮೇಲೆ ಹಲ್ಲೆ

Published:
Updated:

ಬೆಂಗಳೂರು: ನಗರದ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿಯ ಬಿ.ನಾಗಸಂದ್ರದಲ್ಲಿ ಜಲಮಂಡಳಿಯು ಕೈಗೊಂಡಿರುವ ಕುಡಿಯುವ ನೀರಿನ ಕೊಳವೆ ಅಳವಡಿಕೆ ಕಾಮಗಾರಿಯ ಗುತ್ತಿಗೆದಾರ ಎಂ.ಶಿವರಾಜ್ ಮತ್ತು ಅವರ ಸಂಬಂಧಿಕರಾದ ದೇವರಾಜ್ ಎಂಬುವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ್ದಾರೆ.ಈ ಸಂಬಂಧ ದೇವರಾಜ್ ಅವರು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. `ಶಿವರಾಜ್ ಮತ್ತು ನಾನು ಅ.8ರಂದು ಕಾಮಗಾರಿಯ ಸ್ಥಳದಲ್ಲಿದ್ದೆವು. ಈ ವೇಳೆ ಕಾಮಗಾರಿಯ ಸ್ಥಳಕ್ಕೆ ಬಂದ ಭರತ್‌ಗೌಡ, ವೆಂಕಿ, ಕೃಷ್ಣಮೂರ್ತಿ ಮತ್ತು ಸೀನ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರು.ಅಲ್ಲದೇ 15 ಸಾವಿರ ನಗದು, 15 ಗ್ರಾಂ ತೂಕದ ಚಿನ್ನದ ಸರ ಮತ್ತು ಎರಡು ಮೊಬೈಲ್‌ಗಳನ್ನು ಕಿತ್ತುಕೊಂಡು ಪರಾರಿಯಾದರು~ ಎಂದು ದೇವರಾಜ್ ದೂರಿನಲ್ಲಿ ತಿಳಿಸಿದ್ದಾರೆ. ಘಟನೆ ಸಂಬಂಧ ಹಲ್ಲೆ, ಬೆದರಿಕೆ ಹಾಗೂ ದರೋಡೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry