ಸೋಮವಾರ, ಮೇ 23, 2022
30 °C

ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಐ.ಸಿ.ಪಿ.ಎಸ್. ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ತಲಾ ಒಂದು ಡಾಟಾ ಅನಾಲಿಸ್ಟ್ ಮತ್ತು ಔಟ್ ರೀಚ್ ವರ್ಕರ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಡಾಟಾ ಅನಾಲಿಸ್ಟ್ ಹುದ್ದೆಗೆ ಪದವಿ ಹಾಗೂ ಕಂಪ್ಯೂಟರ್ ಜ್ಞಾನ, ಅರ್ಥಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಜ್ಞಾನದ ಅವಶ್ಯಕತೆಯಿದ್ದು, ಅಭ್ಯರ್ಥಿಗಳು 21 ರಿಂದ 30 ವರ್ಷ ವಯೋಮಿತಿಯೊಳಗಿರಬೇಕು. ಔಟ್ ರೀಚ್ ವರ್ಕರ್ ಹುದ್ದೆಗೆ ಪದವಿಪೂರ್ವ ಶಿಕ್ಷಣ ಹೊಂದಿದ್ದು, 18 ರಿಂದ 30 ವರ್ಷ ವಯೋಮಿತಿಯೊಳಗಿರಬೇಕು.ಈ ಎಲ್ಲ ಹುದ್ದೆಗಳು ಗುತ್ತಿಗೆ ಆಧಾರದ ಮೇಲಿದ್ದು, ಮೂರು ವರ್ಷಗಳ ಅವಧಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 2ರೊಳಗಾಗಿ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಲ್ಬರ್ಗ ಕಚೇರಿಗೆ ಸಲ್ಲಿಸಬೇಕು.ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ರೂ. 100 ಡಿಡಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹೆಸರಿಗೆ ಪಡೆದು ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.