ನವದೆಹಲಿ: ಕಳೆದ 30ರಿಂದ 40 ವರ್ಷ ಗುತ್ತಿಗೆ ಆಧಾರದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.ಕಳೆದ 30-40 ವರ್ಷಗಳಿಂದ (ಮಧ್ಯಂತರ ಅವಧಿಯನ್ನು ಹೊರತುಪಡಿಸಿ) ಸರ್ಕಾರ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರು, ವರ್ತಕ ಕಾರ್ಮಿಕರ ಯೂನಿಯನ್ ಮತ್ತು ಗಡಿ ರಸ್ತೆ ಕಾರ್ಮಿಕರ ಸಂಘಟನೆಯ ಸದಸ್ಯರ ಸೇವೆಯನ್ನು ಕಾಯಂಗೊಳಿಸುವಂತೆ ಹೇಳಿದೆ. ಜತೆಗೆ ಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಮುಂದೆ ಉದ್ಭವಿಸಬಹುದಾದ ಸೇವೆ ಕಾಯಂ ಬೇಡಿಕೆಯಿಂದ ತಪ್ಪಿಸಿಕೊಳ್ಳಲು ಆರು ತಿಂಗಳಗಿಂತ ಕಡಿಮೆ ಅವಧಿಗೆ ಮಾತ್ರ ನೌಕರರನ್ನು ನೇಮಕ ಮಾಡಿದ ನಂತರ ಅವರನ್ನು ಸೇವೆಯಿಂದ ಬಿಡುಗಡೆ ಮಾಡುತ್ತಿದ್ದ ಸರ್ಕಾರದ ನೀತಿಯನ್ನು ಸುಪ್ರೀಂ ಕೋರ್ಟ್ ಕಟುವಾಗಿ ಟೀಕಿಸಿದೆ.

ನ್ಯಾಯಮೂರ್ತಿಗಳಾದ ಡಿ.ಕೆ. ಜೈನ್ ಮತ್ತು ಎಚ್.ಎಲ್. ದತ್ತು ಅವರಿದ್ದ ಪೀಠ, ಸರ್ಕಾರ ಅನುಸರಿಸುತ್ತಿರುವ ಈ ತಂತ್ರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರ ಮತ್ತು ಅದರ ಅಂಗಸಂಸ್ಥೆಗಳಿಂದ ಇಂತಹ ನಡೆಯನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ನ್ಯಾಯಾಲಯ, ಇಂತಹ ತಂತ್ರಗಳನ್ನು ಅನುಸರಿಸದಂತೆ ಸಲಹೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.