ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

7

ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

Published:
Updated:
ಗುತ್ತಿಗೆ ಪೌರ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು:  ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಬಿಬಿಎಂಪಿ ಗುತ್ತಿಗೆ ಪೌರಕಾರ್ಮಿಕರ ಸಂಘದ ಸದಸ್ಯರು ಪಾಲಿಕೆಯ ಪ್ರಧಾನ ಕಚೇರಿಯ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.`ಬಿಬಿಎಂಪಿ ಕಳೆದ ಮೂರು ತಿಂಗಳಿನಿಂದ ವೇತನ ಬಿಡುಗಡೆ ಮಾಡಿಲ್ಲ. ಹಿಂದೆ ಪ್ರತಿಭಟನೆ ನಡೆಸಿದಾಗ ಬಾಕಿ ವೇತನವನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ಆ ನಂತರ ವೇತನ ಬಿಡುಗಡೆ ಸಮರ್ಪಕವಾಗಿ ಆಗುತ್ತಿಲ್ಲ. ಪಾಲಿಕೆಯ ಅಧಿಕಾರಿಗಳು ಕೂಡಲೇ ವೇತನವನ್ನು ಬಿಡುಗಡೆ ಮಾಡಬೇಕು' ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.`ಬಿಬಿಎಂಪಿಯು ಪೌರ ಕಾರ್ಮಿಕರ ವೇತನ ಬಿಡುಗಡೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಪೌರ ಕಾರ್ಮಿಕರು ಕೆಲಸ ಮಾಡದೇ ಹೋದರೆ ನಗರ ಕಸದ ತೊಟ್ಟಿಯಾಗುತ್ತದೆ. ಆದರೆ, ಈ ಬಗ್ಗೆ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಜಾಣ ಕುರುಡು ತೋರುತ್ತಿದ್ದಾರೆ. ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಬಿಬಿಎಂಪಿ ಕೂಡಲೇ ಮುಂದಾಗಬೇಕು' ಎಂದು ಸಂಘದ ಅಧ್ಯಕ್ಷ ಎಸ್.ಬಾಲನ್ ಆಗ್ರಹಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry