ಭಾನುವಾರ, ಮೇ 16, 2021
24 °C

ಗುಪ್ತಾ ವಿಚಾರಣೆ: ಅನುಮತಿ ಕೋರಲು ಸಿಬಿಐ ತಯಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಮತ್ತೊಮ್ಮೆ ಸರ್ಕಾರದ ಅನುಮತಿ ಕೇಳುವ ಸಾಧ್ಯತೆ ಇವೆ. ಗುಪ್ತಾ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಕಂಪೆನಿ ವ್ಯವಹಾರಗಳ ಸಚಿವಾಲಯಕ್ಕೆ ಸಿಬಿಐ ಕಳೆದ ವಾರ ಮನವಿ ಮಾಡಿಕೊಂಡಿತ್ತು.ಆದರೆ ಇದನ್ನು ಸಚಿವಾಲಯ ನಿರಾಕರಿಸಿತ್ತು. ಹೀಗಾಗಿ, ಗುಪ್ತಾ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿ ಸಿಬಿಐ, ಈಗ ಸಿಬ್ಬಂದಿ ಹಾಗೂ ತರಬೇತಿ ಇಲಾಖೆಗೆ ಪ್ರಸ್ತಾವ ಸಲ್ಲಿಸಲು ಸಿದ್ಧತೆ ನಡೆಸಿದೆ.2006-09ರ ಅವಧಿಯಲ್ಲಿ ಗುಪ್ತಾ ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿಯಾಗಿದ್ದಾಗ  ಕಲ್ಲಿದ್ದಲು ನಿಕ್ಷೇಪಗಳನ್ನು ಕಾನೂನುಬಾಹಿರವಾಗಿ ಖಾಸಗಿ ಕಂಪೆನಿಗಳಿಗೆ ಹಂಚಿಕೆ ಮಾಡಿದ ಆರೋಪಕ್ಕೆ ಸಿಲುಕಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.