ಗುರಪ್ಪನಪಾಳ್ಯ: ವ್ಯಕ್ತಿ ಆತ್ಮಹತ್ಯೆಗೆ ಶರಣು

7

ಗುರಪ್ಪನಪಾಳ್ಯ: ವ್ಯಕ್ತಿ ಆತ್ಮಹತ್ಯೆಗೆ ಶರಣು

Published:
Updated:

ಬೆಂಗಳೂರು: ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಕೊಲೇಔಟ್ ಸಮೀಪದ ಗುರಪ್ಪನಪಾಳ್ಯದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.ಗುರಪ್ಪನಪಾಳ್ಯ ಒಂಬತ್ತನೇ ಅಡ್ಡರಸ್ತೆ ನಿವಾಸಿ ವೆಂಕಟೇಶ್ (38) ಆತ್ಮಹತ್ಯೆ ಮಾಡಿಕೊಂಡವರು. ಟ್ರ್ಯಾಕ್ಟರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಅವರು ಒಂದು ವರ್ಷದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.ಕುಟುಂಬದವರು ಬೆಳಿಗ್ಗೆ ಹೊರಗೆ ಹೋಗ್ದ್ದಿದಾಗ ಮನೆಯ ಸಮೀಪದ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮೈಕೊಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಧನ


ಸ್ನೇಹಿತನ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕಾಡುಗೊಂಡನಹಳ್ಳಿ ಪೊಲೀಸರು ಸುಮಾರು ರೂ10 ಲಕ್ಷ ಮೌಲ್ಯದ ಆಭರಣ ವಶಪಡಿಸಿಕೊಂಡಿದ್ದಾರೆ.ಗಂಗಾನಗರದ ಲಕ್ಷ್ಮಯ್ಯ ಬ್ಲಾಕ್ ಒಂದನೇ ಅಡ್ಡರಸ್ತೆಯ ಮಂಜುನಾಥ (25) ಮತ್ತು ಆರ್.ಟಿ.ನಗರ ಸಮೀಪದ ಚೋಳನಾಯಕನಹಳ್ಳಿಯ ಕೆ.ಶ್ರೀಧರ (20) ಬಂಧಿತರು. ಆರೋಪಿಗಳು ಆರ್.ಟಿ.ನಗರ ನಿವಾಸಿ ಸುಭಾಷ್ ಎಂಬುವರ ಮನೆಯಲ್ಲಿ ಆಭರಣಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಗಳು, ಸುಭಾಷ್ ಅವರನ್ನು ಕ್ರಿಕೆಟ್ ಮೈದಾನದಲ್ಲಿ ಪರಿಚಯ ಮಾಡಿಕೊಂಡು ಸ್ನೇಹಿತರಾಗಿದ್ದರು. ಇದರಿಂದಾಗಿ ಅವರು ಆಗಾಗ್ಗೆ ಸುಭಾಷ್ ಮನೆಗೆ ಬರುತ್ತಿದ್ದರು. ಅಂತೆಯೇ ಜ.23ರಂದು ಆರೋಪಿಗಳು ಅವರ ಮನೆಗೆ ಬಂದಿದ್ದರು. ಆಗ ಸುಭಾಷ್ ಮನೆಯಲ್ಲಿ ಇರಲಿಲ್ಲ. ಅವರ ತಾಯಿ ಜ್ಯೂಸ್ ಮಾಡಲು ಅಡುಗೆ ಕೋಣೆಗೆ ಹೋಗಿದ್ದಾಗ ಆರೋಪಿಗಳು, ಅಲ್ಮೇರಾದಲ್ಲಿದ್ದ 380 ಗ್ರಾಂ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಬಂಧಿತರು ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನವೊಂದನ್ನು ಕಳವು ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ. ಬಂಧಿತರಿಂದ 10 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ಮತ್ತೊಬ್ಬ ಆರೋಪಿ ಗುರು ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಕೆ.ಆರ್.ಪುರ ಉಪ ವಿಭಾಗದ ಎಸಿಪಿ ಡಾ.ನಾರಾಯಣಸ್ವಾಮಿ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಎನ್.ಎಚ್.ಸಿದ್ದಪ್ಪ, ಎಸ್‌ಐ ಶ್ರೀನಿವಾಸ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry