ಸೋಮವಾರ, ಮೇ 25, 2020
27 °C

ಗುಲ್ಬರ್ಗಕ್ಕೆ ವಿಮಾನ ನಿಲ್ದಾಣ ವಿಳಂಬ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಮಾರು 110 ಕೋಟಿ ವೆಚ್ಚದ ಬಹು ನಿರೀಕ್ಷಿತ ಗುಲ್ಬರ್ಗ ವಿಮಾನ ನಿಲ್ದಾಣ ಇನ್ನೂ ನೀರಿಕ್ಷೆಯಾಗಿಯೇ ಉಳಿದಿದೆ. ಬಿ.ಎಸ್. ಯಡಿಯೂರಪ್ಪ ಅವರು, ಮುಖ್ಯಮಂತ್ರಿಯಾಗಿ ಅಧಿಕಾರದ  ಸೂತ್ರ ಹಿಡಿದ ಕೆಲದಿನಗಳಲ್ಲಿಯೇ ಇಲ್ಲಿಗೆ ಆಗಮಿಸಿ 14-06-2008ರಂದು ಗುಲ್ಬರ್ಗ ವಿಮಾನ ನಿಲ್ದಾಣ ಸ್ಥಾಪನೆಗೆ ಅಡಿಗಲ್ಲು ಹಾಕಿದರು.ಇನ್ನೆರಡು ವರ್ಷಗಳಲ್ಲಿ ವಿಮಾನ ನಿಲ್ದಾಣ ಆರಂಭಗೊಳ್ಳಲಿದೆ ಎಂದು ಘೋಷಿಸಿದ್ದರು. ಈ ಬೆಳವಣಿಗೆಯ ಹಿನ್ನೆಲೆಯಿಂದ ಉದ್ದೇಶಿತ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಭೂಮಿಯ ಬೆಲೆ ಒಂದೇ ಸಮನೆ ಗಗನಕ್ಕೇರಿತು. ಕೇಂದ್ರ ಸರ್ಕಾರದ ನಿಯಮಾವಳಿಗೆ ಅನುಗುಣವಾಗಿ ಯೋಜನೆಯ ಒಡಂಬಡಿಕೆಗೆ ರಾಜ್ಯ ಸರ್ಕಾರ ಸಹಿಹಾಕಿತು. ಇನ್ನೆನು ಕಾಮಗಾರಿ ಆರಂಭಗೊಳ್ಳಲಿದೆ ಎಂದು  ಪತ್ರಿಕೆಗಳಲ್ಲಿ ವರದಿಯಾಯಿತು. ಆದರೆ ಈ ಯೋಜನೆ ಇನ್ನೂ ಕನಸಾಗಿಯೇ ಉಳಿದಿರುವುದು ಅಚ್ಚರಿ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.