ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ

6

ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು:ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.



ಕೋಲಾರ, ಯಲಹಂಕದಲ್ಲಿ 4 ಸೆಂ.ಮೀ. ಮಳೆಯಾಗಿದ್ದು, ರಾಯಲಪಡು, ಹೊಸಕೋಟೆ 3, ಬಂಗಾರಪೇಟೆ, ಜಿಕೆವಿಕೆ 2, ಮೈಸೂರು, ಚಾಮರಾಜನಗರದಲ್ಲಿ 1 ಸೆಂ.ಮೀ.ಮಳೆಯಾಗಿದೆ. ಗುಲ್ಬರ್ಗದಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry