ಸೋಮವಾರ, ಮೇ 17, 2021
22 °C

ಗುಲ್ಬರ್ಗದಲ್ಲಿ ದೇಶದ ಪ್ರಥಮ ಕೌಶಲ ಅಭಿವೃದ್ಧಿ ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಜನಸಂಖ್ಯೆಯ ಪೈಕಿ `ಕೆಲಸ ಮಾಡುವ ಸಾಮರ್ಥ್ಯ ಹೊಂದಿದವರ~ ಪ್ರಮಾಣ ನಮ್ಮ ದೇಶದಲ್ಲಿ ಅಧಿಕ ಇದ್ದು, ಇದನ್ನು ಸದ್ಬಳಕೆ ಮಾಡಿಕೊಂಡರೆ ಭಾರತ ಅಭಿವೃದ್ಧಿ ಸಾಧಿಸಲಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಡಾ. ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅಭಿಪ್ರಾಯಪಟ್ಟರು.“ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಕೆಲಸ ಮಾಡುವ ಸಾಮರ್ಥ್ಯವುಳ್ಳ ಜನರ ಪ್ರಮಾಣ ಕುಸಿಯುತ್ತಿದೆ. ಆದರೆ ತದ್ವಿರುದ್ಧವಾಗಿ ನಮ್ಮ ದೇಶದಲ್ಲಿ ಈ ಪ್ರಮಾಣ ವರ್ಷದಿಂದ ವರ್ಷಕ್ಕೆ ಏರುತ್ತಿದೆ. ಅತಿ ದೀರ್ಘ ಕಾಲ ಕೆಲಸ ಮಾಡುವ ನಮ್ಮ ಜನರ ಸಾಮರ್ಥ್ಯವನ್ನು ಸರಿಯಾಗಿ ಬಳಸಿಕೊಂಡರೆ, ಆರ್ಥಿಕವಾಗಿ ಅಭಿವೃದ್ಧಿ ಸಾಧಿಸಬಹುದು” ಎಂದು ಅವರು ಹೇಳಿದರು.ಕೇಂದ್ರ ಕಾರ್ಮಿಕ ಸಚಿವಾಲಯದ ಮಹತ್ವಾಕಾಂಕ್ಷೆ ಯೋಜನೆಯಾದ, ದೇಶದ ಮೊಟ್ಟ ಮೊದಲ `ಬಹು ಕೌಶಲ ಅಭಿವೃದ್ಧಿ ಕೇಂದ್ರ~ಕ್ಕೆ ಸೋಮವಾರ ಇಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ತಾವು ಸಚಿವರಾದ ದಿನದಂದೇ ಕಂಡಿದ್ದ ಕೌಶಲ ಕೇಂದ್ರ ಸ್ಥಾಪನೆಯ ಕನಸು ಇಂದು ನನಸಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಭಾರತ- ಜರ್ಮನ್ ಅಂತರರಾಷ್ಟ್ರೀಯ ಸಹಕಾರ ಇಲಾಖೆಯ ನಿರ್ದೇಶಕ ಸ್ಟೀಫನ್ ಹೆಲ್ಮಿಂಗ್, ರಾಜ್ಯ ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಮಾತನಾಡಿದರು. ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಜರ್ಮನಿ ಸರ್ಕಾರದ ಸಹಯೋಗದಲ್ಲಿ ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪನೆಯಾಗಲಿರುವ ಈ ಕೇಂದ್ರದಲ್ಲಿ ಅಭ್ಯರ್ಥಿಗಳಿಗೆ ವಿವಿಧ ಬಗೆಯ ಕೌಶಲ ಅಭಿವೃದ್ಧಿ ತರಬೇತಿ ನೀಡಲಾಗುವುದು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.