ಗುರುವಾರ , ಮೇ 6, 2021
26 °C

ಗುಳೆ ತಪ್ಪಿಸಲು ಯೋಜನೆ ಜಾರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಕೇಂದ್ರ ಸರ್ಕಾರ ಸಣ್ಣ ಪಟ್ಟಣದಲ್ಲಿ ವಾಸಿಸುವ ಜನರ ಜೀವನಕ್ಕೆ ಅನುಕೂಲವಾಗುವಂತೆ ರೂಪಿಸಿರುವ ಯೋಜನೆಗಳ ಜಾರಿಯಿಂದ ಜನರು ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ವತಿಯಿಂದ ಗುರುವಾರ ನಡೆದ ಎಸ್‌ಎಫ್‌ಸಿ ಮುಕ್ತ ನಿಧಿ ಹಾಗೂ 13ನೇ ಹಣಕಾಸು ಯೋಜನೆಯಡಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಮಹಿಳಾ ದಿನಾಚರಣೆ ಹಾಗೂ ವಿವಿಧ ಸವಲತ್ತು ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಪಟ್ಟಣದಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಪ್ರತಿ ನಾಗರಿಕರಿಗೆ ಸ್ವಂತ ಮನೆ ಇರಬೇಕು. ಪಟ್ಟಣದಲ್ಲಿ ಯಾವುದೇ ಅಕ್ರಮ ಕಟ್ಟಡ ನಿರ್ಮಾಣವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. 5 ಕೊಳಚೆ ಪ್ರದೇಶಗಳನ್ನು ಗುರುತಿಸಲಾಗಿದ್ದು, 650 ಮನೆಗಳನ್ನು ನಿರ್ಮಿಸಲು ರೂ. 5.25 ಕೋಟಿ ಪ್ರಸ್ತಾವವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.