ಶುಕ್ರವಾರ, ಜೂನ್ 25, 2021
30 °C

ಗೃಹರಕ್ಷಕ ದಳದ ಅರಿವು ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗೃಹರಕ್ಷಕರು ನಗರದ ಮೈಸೂರು ರಸ್ತೆಯ ಸಿಎಆರ್ ಮೈದಾನದ ಬಳಿ ಶನಿವಾರ ಜಾಥಾ ನಡೆಸಿದರು.ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಗೃಹರಕ್ಷಕ ದಳದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಮಾಂಡೆಂಟ್ ಬಿ.ಅಮರನಾಥ್, `ಸಮಾಜದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸಮಾಜ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು~ ಎಂದರು.ಸಿಎಆರ್ ಮೈದಾನದಿಂದ ಆರಂಭವಾದ ಜಾಥಾ ಚಾಮರಾಜಪೇಟೆ, ಶಂಕರಮಠ ಮಾರ್ಗವಾಗಿ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೆ ನಡೆಯಿತು. ಗುರುನಾಥರೆಡ್ಡಿ, ಎಸ್.ಕೃಷ್ಣ, ಆರ್.ವಿಜಯ್‌ಕುಮಾರ್  ಜಾಥಾದಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.