ಮಂಗಳವಾರ, ಏಪ್ರಿಲ್ 13, 2021
29 °C

ಗೃಹ ಕಾರ್ಯದರ್ಶಿ ಮಟ್ಟದ ಸಭೆ: ಚಿದಂಬರಂ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಗೃಹ ಕಾರ್ಯದರ್ಶಿಗಳ ಮಟ್ಟದ ಮಾತುಕತೆ ಉಭಯ ದೇಶಗಳ ನಡುವಿನ ವಿವಾದಗಳನ್ನು ಬಗೆಹರಿಸುವ ನಿಟ್ಟನಲ್ಲಿ ಕೈಗೊಂಡ ಹಲವು ಕ್ರಮಗಳಲ್ಲಿ ಒಂದಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 26/11 ಸಾಕ್ಷಿಗಳನ್ನು ಸಂಗ್ರಹಿಸಲು ಭಾರತದ ತಂಡ ಪಾಕಿಸ್ತಾನಕ್ಕೆ ತೆರಳುವುದಕ್ಕೆ ಯಾವುದೇ ಕಾನೂನಿನ ತೊಡಕೂ ಇಲ್ಲ, ಈಗಿರುವ ಕಾನೂನುಗಳ ಅಡಿಯಲ್ಲೇ ಇದಕ್ಕೆ ವ್ಯವಸ್ಥೆ ಮಾಡುವುದು ಸಾಧ್ಯವಿದೆ ಎಂದರು.ಸಂಜೋತಾ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ವಿವರವನ್ನು ಪಾಕಿಸ್ತಾನಕ್ಕೆ ನೀಡಲಾಗಿದೆ. ಇದೇ ರೀತಿಯಲ್ಲಿ ಪಾಕಿಸ್ತಾನವು ಸಹ 26/11 ಘಟನೆಯ ತನಿಖೆಯ ವಿವರಗಳನ್ನು ಭಾರತದೊಂದಿಗೆ ಹಂಚಿಕೊಳ್ಳುವ ವಿಶ್ವಾಸ ಇದೆ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.