ಗೃಹ ನಿರ್ಮಾಣ ಸಂಘದ ನೂತನ ಶಾಖೆ ಉದ್ಘಾಟನೆ

7

ಗೃಹ ನಿರ್ಮಾಣ ಸಂಘದ ನೂತನ ಶಾಖೆ ಉದ್ಘಾಟನೆ

Published:
Updated:

ಬೆಂಗಳೂರು: ‘ದಿ ಪಾವಗಡ ಸೌಹಾರ್ದ ಮಲ್ಟಿಪರ್ಪಸ್‌ ಕೋ–ಆಪರೇಟಿವ್‌’ ವತಿಯಿಂದ ಸ್ಥಾಪಿಸಲಾಗಿರುವ ಭಾರತ ಮಾತಾ ಗೃಹ ನಿರ್ಮಾಣ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ಭಾನುವಾರ (ಸೆ.22) ನಗರದ ಕೊಡಿಗೆಹಳ್ಳಿ ಗೇಟ್‌ ಮುಖ್ಯ ರಸ್ತೆಯಲ್ಲಿರುವ ಗುಂಡಾಂಜನೇಯ ಸ್ವಾಮಿ ದೇವಾಲಯದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ  ಬಿ.ಎಚ್‌.ಕೃಷ್ಣಾರೆಡ್ಡಿ, ಇದೇ ಸಮಯದಲ್ಲಿ ತುಮಕೂರು ಹಾಗೂ ಬೆಂಗಳೂರಿನಲ್ಲಿ ಪ್ರಾರಂಭವಾಗಲಿರುವ ನೂತನ ಶಾಖೆಗಳ ಉದ್ಘಾಟನೆ ಹಾಗೂ ಸಂಸ್ಥೆಯ 12ನೇ ವಾರ್ಷಿಕ ಸರ್ವ ಸದಸ್ಯರ ಸಭೆಗೆ ಚಾಲನೆ ನೀಡಲಾಗುವುದು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry