ಶುಕ್ರವಾರ, ಮೇ 7, 2021
26 °C

ಗೃಹ ಸಚಿವರ ವಜಾಕ್ಕೆ ಪೊಲೀಸ್ ಕುಟುಂಬ ಸದಸ್ಯರ ಸಂಘ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತನ್ನ ಇಲಾಖೆ ವ್ಯಾಪ್ತಿಗೆ ಬರುವ ಪೊಲೀಸರನ್ನು ರಕ್ಷಿಸಲಾಗದ ಗೃಹ ಸಚಿವರನ್ನು ಈ ಕೂಡಲೇ ವಜಾ ಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಕುಟುಂಬ ಸದಸ್ಯರ ಸಂಘವು ಒತ್ತಾಯಿಸಿದೆ.

ಕೆಲ ವಕೀಲರುಗಳು ಕೆಲವು ತಿಂಗಳ ಹಿಂದೆ ಮಾಧ್ಯಮದವರ ಮೇಲೆ ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದರು.

ಇತ್ತೀಚೆಗೆ ಮತ್ತೆ ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದೆ.

ಇಷ್ಟಾದರೂ ವಕೀಲರನ್ನು ಓಲೈಸುವ ಗೃಹ ಸಚಿವರನ್ನು ಈ ಕೂಡಲೇ ವಜಾಗೊಳಿಸಬೇಕು ಎಂದು ಸಂಘವು ಪ್ರಕಟಣೆಯಲ್ಲಿ ಒತ್ತಾಯಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.