ಭಾನುವಾರ, ಮೇ 9, 2021
27 °C

ಗೆಜೆಟೆಡ್ ಪ್ರೊ ಬೇಷನರ್ಸ್‌ ಹುದ್ದೆ: ಇಂದು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 365 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಭಾನುವಾರ ಪೂರ್ವಭಾವಿ ಪರೀಕ್ಷೆ ನಡೆಸಲಿದೆ.ಆರು ನಗರಗಳ 340 ಕೇಂದ್ರಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ 39,552 ಮಹಿಳೆಯರು ಸೇರಿದಂತೆ ಒಟ್ಟು 1,38,807 ಅಭ್ಯರ್ಥಿಗಳು ಹಾಜರಾಗಲಿದ್ದಾರೆ ಎಂದು ಆಯೋಗದ ಕಾರ್ಯದರ್ಶಿ ವಿ.ಬಿ.ಪಾಟೀಲ ಅವರು `ಪ್ರಜಾವಾಣಿ~ಗೆ ತಿಳಿಸಿದರು.ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷಾ ಪದ್ಧತಿಯಲ್ಲಿ ಕಳೆದ ವರ್ಷ ಬದಲಾವಣೆಯಾಗಿದ್ದು, ಅದಾದ ನಂತರ ನಡೆಯುತ್ತಿರುವ ಮೊದಲ ಪರೀಕ್ಷೆ ಇದಾಗಿದೆ. ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಗುಲ್ಬರ್ಗ, ಮೈಸೂರು ಮತ್ತು ಶಿವಮೊಗ್ಗ ಸೇರಿದಂತೆ ಆರು ನಗರಗಳಲ್ಲಿ ಒಟ್ಟು 340 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.ಸ್ಪರ್ಧಾತ್ಮಕ ಪರೀಕ್ಷೆಯು ತಲಾ 200 ಅಂಕಗಳ ಎರಡು ಕಡ್ಡಾಯ ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿದ್ದು, ಇವು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಪತ್ರಿಕೆಗಳಾಗಿವೆ. ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ ಮಾದರಿಯಲ್ಲೇ ಈ ಬಾರಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಯುತ್ತಿರುವುದರಿಂದ ಮೊದಲಿನ ಹಾಗೆ ವಿಷಯಗಳ ಆಯ್ಕೆಗೆ ಅವಕಾಶವಿಲ್ಲ.ಹೀಗಾಗಿ ಎರಡೂ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವುದು ಅನಿವಾರ್ಯ.  ಪರೀಕ್ಷೆಯಲ್ಲಿ ಅವ್ಯವಹಾರಕ್ಕೆ ಆಸ್ಪದ ಇಲ್ಲದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿಡಿಯೊ ಚಿತ್ರೀಕರಣದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಜವಾಬ್ದಾರಿ ವಹಿಸಲಾಗಿದೆ ಎಂದು ಪಾಟೀಲ ಹೇಳಿದರು.ಫಲಿತಾಂಶ: ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಜೂನ್‌ನಲ್ಲಿ ಪ್ರಕಟವಾಗಲಿದ್ದು, ಮುಖ್ಯ ಪರೀಕ್ಷೆ ಆಗಸ್ಟ್‌ನಲ್ಲಿ ನಡೆಯಲಿದೆ. ಪೂರ್ವಭಾವಿ    ಪರೀಕ್ಷೆಯಿಂದ ಮುಖ್ಯಪರೀಕ್ಷೆಗೆ 1:20ರ ಪ್ರಮಾಣದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ಮುಖ್ಯ ಪರೀಕ್ಷೆ ನಂತರ 1:3ರ ಪ್ರಮಾಣದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಮುಂದಿನ ಜನವರಿ ವೇಳೆಗೆ ಈ ಎಲ್ಲ ಪ್ರಕ್ರಿಯೆಗಳನ್ನು  ಪೂರ್ಣಗೊಳಿಸಿ, ಸರ್ಕಾರಕ್ಕೆ ಆಯ್ಕೆಪಟ್ಟಿಯನ್ನು ಕಳುಹಿಸಿಕೊಡಲು ಆಯೋಗ ಉದ್ದೇಶಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.