ಗುರುವಾರ , ಫೆಬ್ರವರಿ 25, 2021
18 °C

ಗೆದ್ದಲಹಳ್ಳಿಗೆ ಬೇಕಿದೆ ರಸ್ತೆ ಸೌಲಭ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೆದ್ದಲಹಳ್ಳಿಗೆ ಬೇಕಿದೆ ರಸ್ತೆ ಸೌಲಭ್ಯ

ದೊಡ್ಡಬಳ್ಳಾಪುರ: ತಾಲ್ಲೂಕು ಕೇಂದ್ರದಿಂದ ಸುಮಾರು 20 ಕಿ.ಮೀ. ದೂರದ ತೂಬಗೆರೆ ಹೋಬಳಿಯ ಗೆದ್ದಲಹಳ್ಳಿ ಗ್ರಾಮಕ್ಕೆ ರಸ್ತೆ ಸಂಪರ್ಕ ಇಲ್ಲದೆ ಮಳೆಗಾಲದಲ್ಲಿ ನಡೆದಾಡಲು ಸಾಹಸ ಪಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.ದೊಡ್ಡಬಳ್ಳಾಪುರ–ಮಂಚೇನಹಳ್ಳಿ ಮುಖ್ಯ ರಸ್ತೆಯಿಂದ ಗೆದ್ದಲಹಳ್ಳಿ ಗ್ರಾಮಕ್ಕೆ ನಡೆದುಕೊಂಡು ಹೋಗಬೇಕು. ಮಳೆ ಬಂದಾಗ ಕೆಸರು ಗದ್ದೆಯಂತಿರುವ ರಸ್ತೆಯಲ್ಲಿ ವೃದ್ದರು, ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳು ನಡೆದುಕೊಂಡು ಸಹ ಹೋಗಲು ಸಾಧ್ಯವಾಗದಷ್ಟು ಕೆಸರು ತುಂಬಿರುತ್ತದೆ. ಕತ್ತಲಿನ ಸಮಯದಲ್ಲಂತೂ ಯಾರೂ ಗ್ರಾಮಕ್ಕೆ ಬರಲು ಸಾಧ್ಯವೇ ಇಲ್ಲದಾಗಿದೆ.ಈ ಬಗ್ಗೆ ಹಲವಾರು ಬಾರಿ ಜನಪ್ರತಿನಿಧಿಗಳಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕನಿಷ್ಠ ರಸ್ತೆಗೆ ಜಲ್ಲಿಯನ್ನು ಹಾಕಿಸಿ ನಡೆದು ಹೋಗಲು ಅನುಕೂಲ ಕಲ್ಪಿಸಿಲ್ಲ ಎಂದು ಗ್ರಾಮದ ಮುನಿರಾಜು ದೂರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.