ಗೆಲುವಿನ ವಿಶ್ವಾಸವಿದೆ: ಸಿಎಂ

7

ಗೆಲುವಿನ ವಿಶ್ವಾಸವಿದೆ: ಸಿಎಂ

Published:
Updated:
ಗೆಲುವಿನ ವಿಶ್ವಾಸವಿದೆ: ಸಿಎಂ

ಹೊಸಕೋಟೆ: ‘ಉಪ ಚುನಾವಣೆ ನಡೆಯುತ್ತಿರುವ ಎಲ್ಲ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಚುನಾವಣಾ ಪ್ರಚಾರಕ್ಕಾಗಿ ಬಂಗಾರುಪೇಟೆಗೆ ಹೋಗುವ ಮಾರ್ಗ ಸೋಮವಾರ ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಬಳಿಕ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ’ ಎಂದರು.ಉಪಚುನಾವಣೆಯ ಬಳಿಕ ರಾಜ್ಯದ ಆಡಳಿತದಲ್ಲಿ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಎಸ್.ಎಂ.ಕೃಷ್ಣ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕೃಷ್ಣ ಅವರು ಭ್ರಮಾಲೋಕದಲ್ಲಿದ್ದಂತಿದೆ. ಕಾಂಗ್ರೆಸ್‌ನ ನಾಯಕತ್ವದಲ್ಲಿ ಹಿನ್ನಡೆ ಉಂಟಾಗಿದೆ ಎಂಬ ಭಾವನೆ ಬಂದಿದ್ದು, ಅದರ ನಾಯಕತ್ವ ಬದಲಾವಣೆ ಆಗುವ ಸಾಧ್ಯತೆಗಳಿವೆ. ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಎನ್ನುವ ಬದಲು ಬಿಜೆಪಿ ಎಂದು ತಪ್ಪಾಗಿ ಹೇಳಿರಬಹುದು’ ಎಂದು ಲೇವಡಿ ಮಾಡಿದರು.ಸಚಿವ ಬಿ.ಎನ್.ಬಚ್ಚೇಗೌಡ, ಶಾಸಕ ಎನ್.ಎಸ್.ನಂದೀಶ್‌ರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಮುನಿಯಪ್ಪ, ಮುಖಂಡ ಟಿ.ಸೊಣ್ಣಪ್ಪ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry