ಸೋಮವಾರ, ಮೇ 17, 2021
30 °C

ಗೇಲ್ ಪಂದ್ಯ ಕಸಿದುಕೊಂಡರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಹಾಲಿ (ಪಿಟಿಐ): ಸವಾಲಿನ ಮೊತ್ತ ಪೇರಿಸಿದರೂ ಗೆಲುವು ಪಡೆಯಲು ವಿಫಲವಾದದ್ದು ನಿರಾಸೆ ಉಂಟುಮಾಡಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಪಿನ್ನರ್ ಪಿಯೂಷ್ ಚಾವ್ಲಾ ಹೇಳಿದ್ದಾರೆ.ಮೊಹಾಲಿಯಲ್ಲಿ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐದು ವಿಕೆಟ್‌ಗಳಿಂದ ಕಿಂಗ್ಸ್ ಇಲೆವೆನ್ ತಂಡವನ್ನು ಮಣಿಸಿತ್ತು.`ಕ್ರಿಸ್ ಗೇಲ್ ಪಂದ್ಯವನ್ನು ನಮ್ಮ ಕೈಯಿಂದ ಕಿತ್ತುಕೊಂಡರು. ಬೌಲರ್‌ಗಳು ಕೊನೆಯವರೆಗೂ ಗೆಲುವಿಗಾಗಿ ಕಠಿಣ ಪ್ರಯತ್ನ ನಡೆಸಿದರು. ಆದರೆ ಗೇಲ್ ಅವರ ಬ್ಯಾಟಿಂಗ್ ಭಾರಿ ವ್ಯತ್ಯಾಸಕ್ಕೆ ಕಾರಣವಾಯಿತು~ ಎಂದು ಚಾವ್ಲಾ ಪ್ರತಿಕ್ರಿಯಿಸಿದ್ದಾರೆ.ಮೊದಲು ಬ್ಯಾಟ್ ಮಾಡಿದ್ದ ಕಿಂಗ್ಸ್ ಇಲೆವೆನ್ 163 ರನ್ ಪೇರಿಸಿತ್ತು. ಆರ್‌ಸಿಬಿ 19.3 ಓವರ್‌ಗಳಲ್ಲಿ 5 ವಿಕೆಟ್‌ಗೆ 166 ರನ್ ಗಳಿಸಿ ಜಯ ಸಾಧಿಸಿತ್ತು. ಗೇಲ್ 56 ಎಸೆತಗಳಲ್ಲಿ 87 ರನ್ ಗಳಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.