ಶುಕ್ರವಾರ, ಏಪ್ರಿಲ್ 16, 2021
30 °C

ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಮಡಿಕೇರಿ ತಾಲ್ಲೂಕು ಪಂಚಾಯ್ತಿಯ ತ್ರೈಮಾಸಿಕ ಕೆಡಿಪಿ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಆದೇಶಿಸಿದ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ, ಸಂಬಂಧಪಟ್ಟ ತಾಲ್ಲೂಕು ಮಟ್ಟದ ಅಧಿಕಾರಿಗಳ ಬದಲಿಗೆ ಹಾಜರಾಗಿದ್ದ ಇಲಾಖಾ ಪ್ರತಿನಿಧಿಗಳನ್ನು ಸಭೆಯಿಂದ ಹೊರಕಳಿಸಿದ ಪ್ರಸಂಗ ಶುಕ್ರವಾರ ನಡೆಯಿತು. ಮಡಿಕೇರಿ ತಾ.ಪಂ. ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಗೆ ಗೈರು ಹಾಜರಾದಂತಹ ಅಧಿಕಾರಿಗಳ ವಿರುದ್ಧ ಸಿಡಿಮಿಡಿಗೊಂಡ ಕೆ.ಜಿ. ಬೋಪಯ್ಯ, ಗೈರು ಹಾಜರಾದ ಅಧಿಕಾರಿಗಳಿಗೆಲ್ಲಾ ನೋಟಿಸ್ ಜಾರಿಗೊಳಿಸುವಂತೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶಿಸಿದರು.ಅಲ್ಲದೆ, ತ್ರೈಮಾಸಿಕ ಕೆಡಿಪಿ ಸಭೆಗೆ ಪೂರ್ಣ ಮಾಹಿತಿ ಪಡೆಯದೆ ಅಧಿಕಾರಿಗಳು ಬರಕೂಡದು ಎಂದು ಸ್ಪಷ್ಟ ತಾಕೀತು ಮಾಡಿದರಲ್ಲದೆ, ಸಂಬಂಧಪಟ್ಟ ತಾಲ್ಲೂಕು ಮಟ್ಟದ ಅಧಿಕಾರಿಗಳ ಬದಲಿಗೆ ಸಭೆಗೆ ಹಾಜರಾಗಿದ್ದ ಕೆಲವು ಇಲಾಖಾ ಪ್ರತಿನಿಧಿಗಳನ್ನು ಸಭೆಯಿಂದ ಹೊರಗೆ ಕಳಿಸಿದರು. ಈಗಾಗಲೇ ಮಂಜೂರಾತಿ ದೊರೆತಿರುವ ಎಲ್ಲ ಕಾಮಗಾರಿಗಳನ್ನು ಮಾರ್ಚ್ 31ರೊಳಗೆ ಮಾಡಿ ಮುಗಿಸುವ ಮೂಲಕ ಸಂಪೂರ್ಣ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನಸಭಾ ಅಧ್ಯಕ್ಷರು ಅಧಿಕಾರಿಗಳಿಗೆ ಆದೇಶ ನೀಡಿದರು.ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ತಾಂತ್ರಿಕ ತೊಂದರೆಗಳೇನಾದರೂ ಎದುರಾದಲ್ಲಿ ತಮ್ಮ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಈಗಾಗಲೇ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಮಾರ್ಚ್ 31ರೊಳಗೆ ಮುಗಿಸಲು ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು. ಮುಂದಿನ ಕೆಡಿಪಿ ಸಭೆಗೆ ಯಾವುದೇ ಅಧಿಕಾರಿಗಳು ಗೈರು ಹಾಜರಾಗ ಕೂಡದು ಎಂದು ಬೋಪಯ್ಯ ಎಚ್ಚರಿಕೆ ನೀಡಿದರು. ತಾ.ಪಂ. ಅಧ್ಯಕ್ಷೆ ಕವಿತಾ ಪ್ರಭಾಕರ್, ಉಪಾಧ್ಯಕ್ಷೆ ರೇಣುಕಾ ಚೆನ್ನಗಯ್ಯ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ ಸಭೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.