ಶನಿವಾರ, ಮೇ 21, 2022
26 °C

ಗೊಂದಲದ ಗೂಡಾದ ಎಸ್‌ಸಿ- ಎಸ್‌ಟಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ನಗರದ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕುಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ಗೊಂದಲ ಗೂಡಾಗಿ ಮಾರ್ಪಟ್ಟಿತು.ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳು, ಸಂಘ- ಸಂಸ್ಥೆಗಳ ಪದಾಧಿಕಾರಿಗಳಿಗೆ ಆಹ್ವಾನ ನೀಡಿಲ್ಲ. ಯಾವುದೇ, ಮಾಹಿತಿ ನೀಡದೆ ಸಭೆ ನಡೆಸುತ್ತಿರುವ ಉದ್ದೇಶವಾದರೂ ಏನು? ಜಿಲ್ಲಾ ಸಮಿತಿ ಸಭೆಯ್ಲ್ಲಲೂ ಪರಿಶಿಷ್ಟ ವರ್ಗದವರನ್ನು ಕಡೆಗಣಿಸಲಾಗಿದೆ. ಇಂದಿಗೂ ಪ್ರತ್ಯೇಕ ಸಭೆ ನಡೆಸಿಲ್ಲ. ಈ ಸಭೆ ಬಗ್ಗೆಯೂ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪರಿಶಿಷ್ಟ ಪಂಗಡದ ಮುಖಂಡರು ಪ್ರತಿಭಟನೆ ನಡೆಸಿದರು.ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಅವರನ್ನು ಮುಖಂಡರು ತರಾಟೆ ತೆಗೆದುಕೊಂಡರು.

ನಗರಸಭೆ ಸದಸ್ಯ ಸುರೇಶನಾಯಕ, ಚಾ.ಸಿ. ಸೋಮನಾಯಕ ಮಾತನಾಡಿ, ಎಸ್‌ಸಿ-ಎಸ್‌ಟಿ ಹಿತರಕ್ಷಣಾ ಸಮಿತಿ ಸಭೆಗಳಿಗೆ ಪರಿಶಿಷ್ಟ ಸಮುದಾಯ ದವರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದೆ ಎಂದು ದೂರಿದರು.

ಮುಂದಿನ ಸಭೆಗೆ ಕಡ್ಡಾಯವಾಗಿ ಎಲ್ಲರನ್ನೂ ಆಹ್ವಾನಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ನಂತರ, ಪ್ರತಿಭಟನೆ ವಾಪಸ್ ಪಡೆಯಲಾಯಿತು.ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಜಗದೀಶ್ ಮಾತನಾಡಿ, 2009ರಿಂದ ಇಲ್ಲಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆಯಡಿ 13 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 7 ಪ್ರಕರಣಗಳಲ್ಲಿ ಸಂತ್ರಸ್ತರಿಗೆ 3.75 ಲಕ್ಷ ರೂ ಪರಿಹಾರ ನೀಡಲಾಗಿದೆ ಎಂದು ಸಭೆಗೆ ತಿಳಿಸಿದರು.ತಹಶೀಲ್ದಾರ್ ರಂಗಸ್ವಾಮಯ್ಯ, ಪ್ರೊಬೆಷನ್ ಉಪ ವಿಭಾಗಾಧಿಕಾರಿ ಜಗದೀಶ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜೈಕೃಷ್ಣ, ನಗರಸಭೆ ಉಪಾಧ್ಯಕ್ಷೆ ಸೆಲ್ವಿಬಾಬು ಇತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.