ಮಂಗಳವಾರ, ಮೇ 24, 2022
30 °C

ಗೊ.ರು.ಚ. ಅಧಿಕಾರವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಅವರ ಅಧಿಕಾರ ಅವಧಿಯನ್ನು ಬರುವ ಮಾರ್ಚ್ 31ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದೇ 28ಕ್ಕೆ ಚನ್ನಬಸಪ್ಪನವರ ಅವಧಿ ಪೂರ್ಣಗೊಂಡಿತ್ತು. ಆದರೆ ಅವರು ಕೈಗೆತ್ತಿಕೊಂಡಿರುವ ಜಾನಪದ ನಿಘಂಟು ರಚನೆಯ ಕಾರ್ಯ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಕೆಲ ಸಾಹಿತಿಗಳ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಅವಧಿ ವಿಸ್ತರಣೆಗೆ ಸೂಚಿಸಿದ್ದರು. ಆ ಪ್ರಕಾರ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕ್ನಡ ಮ್ತು ಸಂ್ಕೃತಿ ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.