ಶನಿವಾರ, ಮೇ 15, 2021
22 °C

`ಗೋಕರ್ಣ, ಉಡುಪಿ ಮಠ ಸ್ವಾಧೀನ ಇಲ್ಲ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಮತ್ತು ಉಡುಪಿಯ ಅಷ್ಟ ಮಠಗಳನ್ನು ಮುಜರಾಯಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳ ವ್ಯಾಪ್ತಿಗೆ ತರುವ ಕುರಿತು ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಮುಜರಾಯಿ ಸಚಿವ ಪ್ರಕಾಶ್ ಬಿ.ಹುಕ್ಕೇರಿ ಅವರು ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದರು.ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಗಣೇಶ್ ಕಾರ್ಣಿಕ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು ಅಧಿಸೂಚಿತ ದೇವಸ್ಥಾನಗಳಿಗೆ ನೀಡುತ್ತಿದ್ದ ವಾರ್ಷಿಕ ತಸ್ತೀಕ್ ಮೊತ್ತವನ್ನು 12 ಸಾವಿರ ರೂಪಾಯಿಯಿಂದ 24 ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದರು.ಗೋ ಹತ್ಯೆ ತಡೆ- ಹಳೆ ಕಾಯ್ದೆ ಜಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಿಸಿದಂತೆ `ಕರ್ನಾಟಕ ಗೋ ಹತ್ಯೆ ನಿಷೇಧ ಮತ್ತು ಗೋ ಸಂರಕ್ಷಣಾ ಕಾಯ್ದೆ-1964'ನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಮಂಗಳವಾರ ವಿಧಾನ ಪರಿಷತ್‌ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.