ಗುರುವಾರ , ಮೇ 28, 2020
27 °C

ಗೋಪಾಲಕೃಷ್ಣ ಬೇಳೂರ್‌ಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಗರ : ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗದ ಕಾರಣ ಶಾಸಕತ್ವ ಸ್ಥಾನದಿಂದ ಅನರ್ಹಗೊಂಡಿರುವ ಗೋಪಾಲಕೃಷ್ಣ ಬೇಳೂರು ಅವರಿಗೆ ಜೆಎಂಎಫ್ ನ್ಯಾಯಾಲಯ ಸೋಮವಾರ ರೂ 100 ದಂಡ ವಿಧಿಸಿದೆ.2008ರ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಅನುಮತಿ ಇಲ್ಲದೆ ರ್ಯಾಲಿ ನಡೆಸಿದರು ಎನ್ನುವ ಕಾರಣಕ್ಕೆ ಬೇಳೂರು ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಈ ಹಿಂದೆಯೇ ಅವರು ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.ಪ್ರಕರಣದ ಹಿಂದಿನ ವಿಚಾರಣೆ ದಿನಾಂಕದಂದು ಬೇಳೂರು ನ್ಯಾಯಾಲಯಕ್ಕೆ ಗೈರು ಹಾಜರಾಗಿದ್ದರಿಂದ ನ್ಯಾಯಾಧೀಶರು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದರು.ಸೋಮವಾರ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾದ ಬೇಳೂರು ತಮ್ಮ ವಕೀಲರ ಮೂಲಕ ವಾರೆಂಟ್ ಆದೇಶ ರದ್ದುಗೊಳಿಸಲು ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಿದ ನ್ಯಾಯಾಧೀಶರು ರೂ 100 ದಂಡ ವಿಧಿಸಿ ಬೇಳೂರು ವಿರುದ್ಧದ ವಾರೆಂಟ್ ಆದೇಶವನ್ನು ರದ್ದುಗೊಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.