ಗೋಪಾಲ್ ಕಾಂಡಾಗೆ ಮಧ್ಯಂತರ ಜಾಮೀನು

7

ಗೋಪಾಲ್ ಕಾಂಡಾಗೆ ಮಧ್ಯಂತರ ಜಾಮೀನು

Published:
Updated:

ನವದೆಹಲಿ (ಪಿಟಿಐ/ಐಎಎನ್‌ಎಸ್): ವಿಮಾನ ಸಂಸ್ಥೆಯ ಮಾಜಿ ಪರಿಚಾರಕಿ ಗೀತಿಕಾ ಶರ್ಮಾ ಆತ್ಮಹತ್ಯೆ ಸಂಬಂಧ ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಜೈಲಿನಲ್ಲಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೊಯಲ್ ಕಾಂಡಾ ಅವರಿಗೆ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ.ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಂ.ಸಿ. ಗುಪ್ತಾ ಅವರು, ಕಾಂಡಾ ಅವರಿಗೆ ಅಕ್ಟೋಬರ್ 4ರ ವರೆಗೆ ಜಾಮೀನು ಮಂಜೂರು ಮಾಡಿದ್ದಾರೆ.ಕಾಂಡಾ ಅವರು ಹರಿಯಾಣದ ಸಿರ್ಸಾ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮಧ್ಯಂತರ ಜಾಮೀನು ಕೋರಿ ಕಾಂಡಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.5 ಲಕ್ಷ ರೂಪಾಯಿ ಮೊತ್ತದ ಬಾಂಡ್ ಮತ್ತು ಅಷ್ಟೇ ಮೊತ್ತದ ಭದ್ರತಾ ಠೇವಣಿ ಇರಿಸುವಂತೆ ಕಾಂಡಾ ಅವರಿಗೆ ನ್ಯಾಯಾಲಯ ಸೂಚಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry