ಮಂಗಳವಾರ, ಏಪ್ರಿಲ್ 13, 2021
31 °C

ಗೋಮಾಂಸ ಮಾರಾಟ: ಐವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು:  ನಗರದಲ್ಲಿ ಇತ್ತೀಚೆಗೆ ಉದ್ವಿಗ್ನ ವಾತಾವರಣ ಸೃಷ್ಟಿಗೆ ಕಾರಣವಾಗಿದ್ದ ಗೋವಧೆ ಮಾಡುವ ಅಕ್ರಮ ಕಸಾಯಿಖಾನೆಗಳ ಮೇಲೆ ನಗರಸಭೆ ಸಿಬ್ಬಂದಿ, ನಗರ ಠಾಣೆ ಮತ್ತು ಬಸವನಹಳ್ಳಿ ಠಾಣೆ ಪೊಲೀಸರು ಬುಧವಾರ ಜಂಟಿ ದಾಳಿ ನಡೆಸಿ ಐವರನ್ನು ಬಂಧಿಸಿದರು.ಜಾಗೃತ ದಳ: ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ತಡೆಗೆ ನಗರಸಭೆ ಮತ್ತು ಪೊಲೀಸ್ ಸಿಬ್ಬಂದಿಯ ಜಾಗೃತ ದಳ ರಚಿಸಲಾಗಿದ್ದು, 20ಕ್ಕೂ ಅಧಿಕ ಅನಧಿಕೃತ ಗೋಮಾಂಸ ಮಾರಾಟ ಮಳಿಗೆಗಳ ಮೇಲೆ ಬುಧವಾರ ದಾಳಿ ನಡೆಸಿ ಬೀಗಮುದ್ರೆ ಹಾಕಲಾಗಿದೆ. ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ನಗರ ಠಾಣೆಗೆ ದೂರು ನೀಡಲಾಗಿದೆ ಎಂದು ಆಯುಕ್ತ ಕೃಷ್ಣಮೂರ್ತಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.