ಬೆಂಗಳೂರು: `ಹಳದಿ ಎಲೆ ರೋಗ ಸೇರಿದಂತೆ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಡಾ. ಗೋರಖ್ ಸಿಂಗ್ ಸಮಿತಿಯು, 10 ಎಕರೆವರೆಗೆ ಅಡಿಕೆ ತೋಟ ಹೊಂದಿರುವ ರೈತರ ಸಾಲ ಮನ್ನಾ ಮಾಡಬಹುದು ಎಂದು ಶಿಫಾರಸು ನೀಡಿದೆ. ಆದರೆ ಸಾಲ ಮನ್ನಾ ಶಿಫಾರಸನ್ನು ಕೇಂದ್ರ ಸರ್ಕಾರ ಒಪ್ಪಿಲ್ಲ' ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧೀನ ಕಾರ್ಯದರ್ಶಿ ಜಿತೇಂದ್ರ ಕುಮಾರ್ ಮೆಹನ್ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಅಡಿಕೆ ಬೆಳೆಗಾರರ ಸಾಲ ಮನ್ನಾ ಮಾಡಬಹುದು ಎಂಬ ಶಿಫಾರಸನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುತ್ತಿಲ್ಲ. ಡಾ. ಸಿಂಗ್ ವರದಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಕೆಪಿಸಿಸಿ ಕಿಸಾನ್ ಘಟಕದ ಉಪಾಧ್ಯಕ್ಷ ಸಚಿನ್ ಮೀಗಾ ಮತ್ತು ಇತರರು 2011ರಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ಅಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸಿತ್ತು.

`ಡಾ. ಸಿಂಗ್ ಸಮಿತಿಯ ಶಿಫಾರಸುಗಳ ಅನುಷ್ಠಾನಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಮೂರು ತಿಂಗಳಲ್ಲಿ ಕ್ರಮ ಜರುಗಿಸಬೇಕು' ಎಂದು ವಿಭಾಗೀಯ ಪೀಠ 2012ರ ಸೆಪ್ಟೆಂಬರ್ 25ರಂದು ಆದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಆದೇಶ ಪಾಲಿಸಿಲ್ಲ ಎಂದು ದೂರಿ ಮೀಗಾ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ಇದರ ವಿಚಾರಣೆಯನ್ನು ನ್ಯಾಯಮೂರ್ತಿ ಎನ್. ಕುಮಾರ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ನಡೆಸಿತು. `ಅಡಿಕೆ ಬೆಳೆಗಾರರ ಸಂಕಷ್ಟ ಅರಿತು, ತೋಟದಿಂದ ದೊರೆಯುವ ಆದಾಯ ಹೆಚ್ಚಿಸಲು ಕೇಂದ್ರ ಸಾಕಷ್ಟು ಕ್ರಮ ಕೈಗೊಂಡಿದೆ' ಎಂದೂ ಮೆಹನ್ ಹೇಳಿಕೆ ಸಲ್ಲಿಸಿದರು. ಆದರೆ ಇದು ನ್ಯಾಯಪೀಠಕ್ಕೆ ತೃಪ್ತಿ ತರಲಿಲ್ಲ.

`ಸಾಲ ಮನ್ನಾ ಶಿಫಾರಸಿನ ಕುರಿತು ಮೂರು ತಿಂಗಳಲ್ಲಿ ಕ್ರಮ ಕೈಗೊಳ್ಳಿ ಎಂಬ ಆದೇಶ ಇದೆ. ಅದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ. ಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಯಾವ ಕ್ರಮ ಕೈಗೊಂಡಿದ್ದೀರಿ ಎಂಬುದನ್ನು ತಿಳಿಸಿ' ಎಂದು ಕೇಂದ್ರ ಸರ್ಕಾರದ ಪರ ವಕೀಲರಿಗೆ ತಿಳಿಸಿತು. ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.