ಸೋಮವಾರ, ಏಪ್ರಿಲ್ 19, 2021
33 °C

ಗೋರ್ಖಾಲ್ಯಾಂಡ್ ಚುನಾವಣೆ: ಜಿಜೆಎಂ ಜಯಭೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡಾರ್ಜಿಲಿಂಗ್ (ಪಿಟಿಐ): ಹೊಸದಾಗಿ ರಚನೆಗೊಂಡ ಗೋರ್ಖಾಲ್ಯಾಂಡ್ ಪ್ರಾದೇಶಿಕ ಸ್ವಾಯತ್ತಾಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಗೂರ್ಖಾ ಜನಮುಕ್ತಿ ಮೋರ್ಚಾ ಪಕ್ಷ (ಜಿಜೆಎಂ ) ಎಲ್ಲ 45 ಸ್ಥಾನಗಳನ್ನು ಗೆಲ್ಲುವ ಮೂಲಕ ಜಯಭೇರಿ ಭಾರಿಸಿದೆ.ಇದಕ್ಕೂ ಮೊದಲು ಎರಡು ಪ್ರಮುಖ ಪಕ್ಷಗಳಾದ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಎಂ ಸ್ಪರ್ಧೆಯಿಂದ ಹಿಂದಕ್ಕೆ ಸರಿದ ಕಾರಣ 28 ಸ್ಥಾನಗಳಲ್ಲಿ ಜಿಜೆಎಂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದರು. ಉಳಿದ 17 ಸ್ಥಾನಗಳಿಗೆ ಜುಲೈ 29ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಗುರುವಾರ ಬೆಳಿಗ್ಗೆ ಆರಂಭವಾಗಿ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬಿದ್ದಿದೆ.ನಾಳೆ ಶಿಂಧೆ ಭೇಟಿ: ಶನಿವಾರ ಹೊಸ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಹ್ವಾನದ ಮೇರೆಗೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.`ಇದು ನಿರೀಕ್ಷಿತ ಜಯ~ ಎಂದಿರುವ ಜಿಜೆಎಂ ನಾಯಕ ಹರ್ಕಾ ಬಹದ್ದೂರ್ ಚೆಟ್ರಿ, `ಗುಡ್ಡಗಾಡು ಪ್ರದೇಶದಲ್ಲಿ ನಮ್ಮ ಪಕ್ಷ ಹೊರತುಪಡಿಸಿದರೆ ಬೇರೆ ಪಕ್ಷಗಳಿಲ್ಲ ಎಂಬುವುದನ್ನು ಈ ಫಲಿತಾಂಶ ಸಾಬೀತುಪಡಿಸಿದೆ~ ಎಂದು ಹೇಳಿದ್ದಾರೆ.`ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಸುಧಾರಣೆ ತಮ್ಮ ಮೊದಲ ಆದ್ಯತೆಯಾಗಿದ್ದು, ಗುಡ್ಡಗಾಡು ಪ್ರದೇಶವನ್ನು ಪ್ರವಾಸಿಗರ ಆಕರ್ಷಣೀಯ ತಾಣವಾಗಿ ಅಭಿವೃದ್ಧಿ ಪಡಿಸುವುದು ತಮ್ಮ ಗುರಿ~ ಎಂದು ಪ್ರತಿಕ್ರಿಯಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.