ಮಂಗಳವಾರ, ಮೇ 11, 2021
25 °C

ಗೋವಾ: ಅಕ್ರಮ ಗಣಿಗಾರಿಕೆ ತನಿಖೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ (ಐಎಎನ್‌ಎಸ್): ಗೋವಾದಲ್ಲಿನ ಅಕ್ರಮ ಗಣಿಗಾರಿಕೆ ಕುರಿತಂತೆ ನ್ಯಾಯಮೂರ್ತಿ ಎಂ.ಬಿ.ಷಾ ನೇತೃತ್ವದ ಆಯೋಗದ ಸದಸ್ಯರು ಬುಧವಾರ ತನಿಖೆ ಆರಂಭಿಸಿದರು. ರಾಜ್ಯದಲ್ಲಿ ಕನಿಷ್ಠ 100 ಕಂಪೆನಿಗಳು ಗಣಿಗಾರಿಕೆ ನಡೆಸುತ್ತಿದ್ದು ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ದೂರಗಳನ್ನು ಈ ಆಯೋಗದ ಸದಸ್ಯರು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ.`ರಾಜ್ಯ ಸರ್ಕಾರದ ಅಧಿಕಾರಿಗಳು ಆಯೋಗಕ್ಕೆ ಎಲ್ಲ ಸಹಕಾರ ನೀಡಲಿದ್ದಾರೆ. ಈಗಾಗಲೇ ಆಯೋಗದ ಸದಸ್ಯರು ವಿವಿಧ ತಂಡಗಳನ್ನು ರಚಿಸಿಕೊಂಡಿದ್ದು, ಪ್ರತಿ ತಂಡವೂ 12 ಗಣಿಗಾರಿಕೆ ಪ್ರದೇಶಗಳ ಪರಿಶೀಲನೆ ನಡೆಸಲಿದೆ~ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಮೂರು ವಾರಗಳ ಕಾಲ ಗೋವಾ ರಾಜ್ಯದಾದ್ಯಂತ ಸಂಚರಿಸಲಿರುವ ಆಯೋಗದ ಸದಸ್ಯರು ಗಣಿಗಾರಿಕೆ ಕುರಿತಂತೆ ಎಲ್ಲ ಅಂಕಿ ಅಂಶಗಳು ಮತ್ತು ಸಂಪೂರ್ಣ ವಿವರಗಳನ್ನು ಕಲೆ ಹಾಕಲಿದ್ದಾರೆ. ಪ್ರಮುಖವಾಗಿ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ, ರಫ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.ಈವರೆವಿಗೂ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಯ ಮೊತ್ತವನ್ನು 1,200 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷವೊಂದರಲ್ಲೇ ರಾಜ್ಯದ ವಿವಿಧೆಡೆ 54 ದಶಲಕ್ಷ ಟನ್‌ಗಳಷ್ಟು ಅದಿರನ್ನು ಹೊರ ತೆಗೆಯಲಾಗಿದೆ.  ಪ್ರತಿಪಕ್ಷಗಳ ಆಪಾದನೆ: ಮುಖ್ಯಮಂತ್ರಿ ದಿಗಂಬರ ಕಾಮತ್ ಮತ್ತು ಅವರ ಸಂಪುಟದ  ಹಲವು ಸಚಿವರು ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಗಳಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಮನೋಹರ ಪಾರಿಕ್ಕರ್ ಆಪಾದಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.