ಗೋವಾ: ಕಟ್ಟಡ ಕುಸಿತ, 14 ಸಾವು

7

ಗೋವಾ: ಕಟ್ಟಡ ಕುಸಿತ, 14 ಸಾವು

Published:
Updated:

ಪಣಜಿ(ಪಿಟಿಐ): ಮೂರು ಮಹಡಿ­ಯ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪರಿಣಾಮ ಒಟ್ಟು ಹದಿನಾಲ್ಕು ಜನ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಸಮೀಪ­ದ ಕಾಣಕೋಣ್‌ ಪಟ್ಟಣದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಕಟ್ಟಡದ ಅವಶೇಷಗಳ ಅಡಿ­ಯಲ್ಲಿ ಇನ್ನು 20–30 ಕಾರ್ಮಿಕರು ಸಿಲುಕಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದಲ್ಲಿ ಎಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬ ಸ್ಟಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶೇಖರ್‌ ಪ್ರಭುದೇಸಾಯಿ ತಿಳಿಸಿದರು.ಕಟ್ಟಡ ನಿರ್ಮಾಣದಲ್ಲಿ 50ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry