ಗೋವಾ: ಬಿಜೆಪಿಯಿಂದ ಮಹಿಳಾ ಅಭ್ಯರ್ಥಿಗಳೇ ಇಲ್ಲ!

7

ಗೋವಾ: ಬಿಜೆಪಿಯಿಂದ ಮಹಿಳಾ ಅಭ್ಯರ್ಥಿಗಳೇ ಇಲ್ಲ!

Published:
Updated:

ಪಣಜಿ (ಐಎಎನ್‌ಎಸ್): ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಒಬ್ಬ ಮಹಿಳಾ ಅಭ್ಯರ್ಥಿಯನ್ನೂ ಕಣಕ್ಕಿಳಿಸಿಲ್ಲ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಭಾನುವಾರ ಜನತೆಯ ಕ್ಷಮೆ ಯಾಚಿಸಿದ್ದಾರೆ.

ರಾಜ್ಯದಲ್ಲಿ ಮಾರ್ಚ್ 3ರಂದು ಚುನಾವಣೆ ನಡೆಯಲಿದ್ದು, 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿಗೆ ಒಬ್ಬರೂ ಮಹಿಳಾ ಅಭ್ಯರ್ಥಿ ಸಿಗಲಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, `ನಮಗೆ ಸೂಕ್ತ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗಲಿಲ್ಲ, ಅದಕ್ಕಾಗಿಯೇ ಚುನಾವಣೆಯಲ್ಲಿ ಶೇ 33ರಷ್ಟು ಮಹಿಳಾ ಮೀಸಲಾತಿಗೆ ಬಿಜೆಪಿ ಬೆಂಬಲಿಸುತ್ತಿದೆ~ ಎಂದು ಹೇಳಿದರು.

ಕಾಂಗ್ರೆಸ್ ಪ್ರಣಾಳಿಕೆ: ಭೂ ವಿವಾದ ಪ್ರಸ್ತಾಪ ಸಾಧ್ಯತೆ

ಪಣಜಿ (ಪಿಟಿಐ): ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಭೂ ವಿವಾದದ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆ ಇದೆ. ಜೊತೆಗೆ ಶಾಲೆ ಬಿಟ್ಟ ಮಕ್ಕಳಿಗೆ ಭದ್ರತೆ ಮತ್ತು ವಿಪತ್ತು ನಿರ್ವಹಣಾ ಕೌಶಲದ ತರಬೇತಿ ಶಾಲೆ ಆರಂಭಿಸುವ ಭರವಸೆ ನೀಡುವ ಸಾಧ್ಯತೆ ಇದೆ. ಹಣಕಾಸು ಸಚಿವ ಪ್ರಣವ್ ಮುಖರ್ಜಿ ಸೋಮವಾರ ಇಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡುವ ನೀರಿಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry