ಗೋಶಾಲೆ ತೆರೆಯಲು ಸಂಘ ಸಂಸ್ಥೆಗಳಿಗೆ ಗೋಮಾಳ ಭೂಮಿ
ಬೆಂಗಳೂರು: ರಾಜ್ಯದಲ್ಲಿ ಗೋಶಾಲೆಗಳನ್ನು ತೆರೆಯಲು ಮುಂದೆ ಬರುವ ಸಂಘ ಸಂಸ್ಥೆಗಳಿಗೆ ಮಾರುಕಟ್ಟೆ ಮೌಲ್ಯದ ಶೇ 20ರ ದರದಲ್ಲಿ ಗೋಮಾಳ ಭೂಮಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೋಶಾಲೆಗಳಿಗೆ ಉಚಿತವಾಗಿ ಭೂಮಿ ನೀಡುವ ಸಂಬಂಧ ಪರ- ವಿರೋಧ ಚರ್ಚೆಯಾಗಿದ್ದು, ಅಂತಿಮವಾಗಿ ಶೇ 20ರ ದರಕ್ಕೆ ಭೂಮಿ ನೀಡಲು ನಿರ್ಧರಿಸಲಾಯಿತು ಎಂದು ಉನ್ನತ ಮೂಲಗಳು ತಿಳಿಸಿವೆ.
ಕೆಲ ಸಚಿವರು ಉಚಿತವಾಗಿ ಭೂಮಿ ನೀಡಬೇಕು ಎಂದು ವಾದಿಸಿದರು. ಆದರೆ ಉಚಿತವಾಗಿ ಭೂಮಿ ನೀಡಿದರೆ ತಪ್ಪು ಸಂದೇಶ ಹೋಗುತ್ತದೆ. ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೇ 20ರ ದರದಲ್ಲಿ ಭೂಮಿ ನೀಡುವುದು ಸೂಕ್ತ ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದಕ್ಕೆ ಸಂಪುಟ ಸಭೆ ಸಮ್ಮತಿ ಸೂಚಿಸಿತು ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.