ಬುಧವಾರ, ಏಪ್ರಿಲ್ 14, 2021
24 °C

ಗೋಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್:  ರಾಜ್ಯ ಸರ್ಕಾರ ಹಿಂದುಳಿದ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಬದ್ಧವಾಗಿದ್ದು, ಈ ವರ್ಗದ ಆರ್ಥಿಕ, ಸಾಮಾಜಿಕ ಪ್ರಗತಿಗಾಗಿ  ಹಲವು ಯೋಜನೆಗಳನ್ನು ರೂಪಿಸಿದೆ. ಹಿಂದುಳಿದವರ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಉಸ್ತುವಾರಿ ಸಚಿವ ಸುನೀಲ್ ವಲ್ಯ್‌ಪುರೆ ತಿಳಿಸಿದರು.ನಗರದ ಎಸ್‌ಆರ್‌ಎಸ್ ಫಂಕ್ಷನ್ ಹಾಲ್‌ನಲ್ಲಿ ಸೋಮವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 97ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅರಸು ಅವರು ರಾಜಕೀಯ ಮುತ್ಸದ್ಧಿ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಅಭಿವದ್ಧಿಗೆ ಅನೇಕ ಕ್ರಮಗಳನ್ನು ಕೈಗೊಂಡಿದ್ದರು ಎಂದು ಅರಸು ಅವರ ಕೊಡುಗೆಯನ್ನು ಸ್ಮರಿಸಿದರು.ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಾಬುರಾವ್ ಶಂಕರರಾವ್ ಅವರು, ಸರ್ಕಾರದ  ವಿವಿಧ ಶೈಕ್ಷಣಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮುಂದೆ ಬರಲು ಹಿಂದುಳಿದ ವರ್ಗದವರು ಆಸಕ್ತಿ ತೋರಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಂಖಾನ್ ಅವರು, ದೇವರಾಜ ಅರಸು ಅವರು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಏಳಿಗೆಗೆ ಶ್ರಮಿಸಿದ ಮಹಾನ್ ವ್ಯಕ್ತಿ. ಅವರ ಮಾರ್ಗದರ್ಶನ ನಮಗೆ ದಾರಿದೀಪ ಎಂದು ತಿಳಿಸಿದರು.ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣ ಅಧಿಕಾರಿ ಎಂ.ಎಸ್.ಕಟಗಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಜಗನ್ನಾಥ ಹೆಬ್ಬಾಳೆ ಮತ್ತು ಬಿ.ಎಂ. ಅಮರವಾಡಿ ಉಪನ್ಯಾಸ ನೀಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಅಭಿವದ್ಧಿ ನಿಗಮ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.