ಮಂಗಳವಾರ, ಏಪ್ರಿಲ್ 13, 2021
29 °C

ಗೋಹತ್ಯೆ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಹತ್ಯೆ ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಗೋಹತ್ಯೆ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ನಗರದ ಅಶೋಕ ವೃತ್ತದಲ್ಲಿ ಗುರುವಾರ ಧರಣಿ ಮಾಡಿದರು.ಗೋವು ರೈತರ ಮತ್ತು ದೇಶದ ಆರ್ಥಿಕತೆಯ ಬೆನ್ನೆಲುಬು. ಗೋವಿನ ಉತ್ಪನ್ನಗಳು ಔಷಧೀಯ ಗುಣ ಹೊಂದಿದೆ. ಧಾರ್ಮಿಕವಾಗಿ ಪವಿತ್ರ ಸ್ಥಾನ ಹೊಂದಿರುವ ನೂರಾರು ಗೋವುಗಳನ್ನು ಪ್ರತಿನಿತ್ಯ ಜಿಲ್ಲೆಯಲ್ಲಿರುವ 50ಕ್ಕೂ ಹೆಚ್ಚು ಅಕ್ರಮ ಕಸಾಯಿಖಾನೆಗಳಲ್ಲಿ  ಹತ್ಯೆ ಮಾಡಲಾಗುತ್ತಿದೆ. ಆದರಿಂದ ಕೂಡಲೇ ಗೋಹತ್ಯೆಯನ್ನು ತಡೆಯಬೇಕು ಎಂದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸರ್ಕಾರ ಕೂಡಲೇ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು, ಕಸಾಯಿಖಾನೆಗಳನ್ನು ಬಂದ್ ಮಾಡಿ ಅಕ್ರಮ ಗೋ ಸಾಗಾಣೆಯನ್ನು ತಡೆಯಬೇಕು. ತಕ್ಷಣ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.ಬಜರಂಗದಳದ ರಾಜ್ಯ ಸಂಚಾಲಕ ಸೂರ್ಯನಾರಾಯಣ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು, ನಗರ ಘಟಕದ ಅಧ್ಯಕ್ಷ ಶ್ಯಾಮರಾವ್ ಸಿರ್ಕೆ, ಬಜರಂಗ ದಳದ ಜಿಲ್ಲಾ ಸಂಚಾಲಕ ದೀನದಯಾಳ್, ರಾಜು, ನಾರಾಯಣ್, ನಟರಾಜು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.