ಗೋಹತ್ಯೆ ನಿಷೇಧ ಮಸೂದೆ ಎಲ್ಲಿ?
ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕಾರವಾದ ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮಸೂದೆ-2010 ಎಲ್ಲಿದೆ?ಇದು ಪ್ರತಿಯೊಬ್ಬರನ್ನೂ ಕಾಡುತ್ತಿರಬಹುದು. ಕಳೆದ ಅಧಿವೇಶನ ಸಂದರ್ಭದಲ್ಲಿ ಅಂಗೀಕಾರವಾದ ಈ ಮಸೂದೆಯನ್ನು ರಾಷ್ಟ್ರಪತಿಗಳ ಅಂಗೀಕಾರಕ್ಕೆ ರಾಜ್ಯಪಾಲರು ಕಳುಹಿಸಿದ್ದರು. ಆದರೆ, ಅದಿನ್ನೂ ರಾಷ್ಟ್ರಪತಿ ಭವನ ತಲುಪಿಲ್ಲ!
ಅಖಿಲ ಕರ್ನಾಟಕ ಪ್ರಾಣಿ ದಯಾ ಸಂಘದ ಸುನಿಲ್ ದುಗಾರ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ರಾಷ್ಟ್ರಪತಿ ಭವನದಿಂದ ಮಾಹಿತಿ ಪಡೆದಿದ್ದು, ಅದರಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ. ಈ ಮಸೂದೆ ಇನ್ನೂ ರಾಷ್ಟ್ರಪತಿ ಭವನ ಮುಟ್ಟಿಲ್ಲ ಎಂದು ಅಲ್ಲಿನ ಆರ್ಟಿಐ ಅಧಿಕಾರಿ ಲಿಖಿತವಾಗಿ ತಿಳಿಸಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ ರಾಜ್ಯ ಸಂಸದೀಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ ‘ಈ ಮಸೂದೆ ಇನ್ನೂ ಕೇಂದ್ರ ಗೃಹ ಸಚಿವಾಲಯದಲ್ಲಿಯೇ ಇರುವುದು ಗೊತ್ತಾಗಿದೆ. ಗೃಹ ಇಲಾಖೆ ಪರಿಶೀಲಿಸಿದ ನಂತರವೇ ಅದು ರಾಷ್ಟ್ರಪತಿಗಳ ಅಂಕಿತಕ್ಕೆ ಹೋಗುವುದು. ಆದರೆ, ಈ ಪ್ರಕ್ರಿಯೆ ಇನ್ನೂ ನಡೆದಿಲ್ಲ ಎನ್ನಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.