ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ರ‌್ಯಾಲಿ

7

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ರ‌್ಯಾಲಿ

Published:
Updated:
ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ರ‌್ಯಾಲಿ

ಬೀದರ್: ನಗರಸಭೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ಗೌರವ ಧನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ನೌಕರರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟನಾ ರ‌್ಯಾಲಿ ನಡೆಸಿದರು.ಗರಸಭೆಯಲ್ಲಿ ಕಳೆದ 10-15 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಪುರುಷ ನೌಕರರಿಗೆ ಮಾಸಿಕ ರೂ. 2,600, ಮಹಿಳೆಯರಿಗೆ ರೂ. 1,800 ಮತ್ತು ವಾಹನ ಚಾಲಕರಿಗೆ ರೂ. 2,800 ವೇತನ ಮಾತ್ರ ಕೊಡಲಾಗುತ್ತಿದೆ ಎಂದು ನಗರಸಭೆ ಆಯುಕ್ತರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಲಾಗಿದೆ.ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವವರಿಗೆ ಹಾಗೂ ಕಟ್ಟಡ ಕಾರ್ಮಿಕರಿಗೆ ನಿತ್ಯ 150 ರೂಪಾಯಿ ಕೂಲಿ ಕೊಡಲಾಗುತ್ತಿದೆ. ಆದರೆ, ನಗರಸಭೆ ಗುತ್ತಿಗೆ ನೌಕರರಿಗೆ ಮಾತ್ರ ಇದರ ಅರ್ಧಕ್ಕಿಂತ ಕಡಿಮೆ ವೇತನ ನೀಡಲಾಗುತ್ತಿದೆ. ಅಲ್ಪ ಸಂಬಳದಲ್ಲಿ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಅಲ್ಲದೇ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಕೂಡ ಸಾಧ್ಯವಾಗದಂತಾಗಿದೆ ಎಂದು ತಿಳಿಸಿದ್ದಾರೆ.ಫೆಡರೇಷನ್ ಜಿಲ್ಲಾ ಸಂಚಾಲಕ ವಿಜಯಕುಮಾರ ಸೋನಾರೆ, ಪ್ರಮುಖರಾದ ಸುನೀಲ ಕಡ್ಡೆ ಮತ್ತಿತರರು ಸೇರಿದಂತೆ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry