ಶಿವಮೊಗ್ಗ: ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸ-ಕಾರ್ಯಗಳಿಗೆ ಗೌರವ ತರುವ ರೀತಿಯಲ್ಲಿ ಸೌಲಭ್ಯ ಕಲ್ಪಿಸಲು ಬಜೆಟ್ನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭರವಸೆ ನೀಡಿದರು.

ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರ ಸಂಘ ಹಮ್ಮಿಕೊಂಡಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಗ್ರಂಥಾಲಯ ಇಲಾಖೆ ಸೇರಿದಂತೆ ಬೇರೆ ಬೇರೆ ಇಲಾಖೆಗಳಲ್ಲಿ 2.20 ಲಕ್ಷ ಜನ ಗೌರವಧನದೊಂದಿಗೆ ಕೆಲಸ ಮಾಡುವವರಿದ್ದಾರೆ. ಇವರ ಭವಿಷ್ಯ ಚೆನ್ನಾಗಿರಬೇಕಾದರೆ ಜೀವನಾಶ್ಯಕ ಸಂಬಳ ಅಗತ್ಯ. ಸುಪ್ರೀಂಕೋರ್ಟ್ ಕೂಡ ಕೆಲವು ಮಾರ್ಗದರ್ಶಿ ಸೂಚನೆಗಳನ್ನು ನೀಡಿದೆ. ಇದರ ಆಧಾರದ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ಗ್ರಾಮ ಪಂಚಾಯ್ತಿ ಗ್ರಂಥಾಲಯಗಳ ಮೇಲ್ವಿಚಾರಕರ ಸಂಘ ಹಾಗೂ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಅಧ್ಯಕ್ಷ ಆರಗ ಜ್ಞಾನೇಂದ್ರ ಮಾತನಾಡಿ, ರಾಜ್ಯದಲ್ಲಿ 5,766 ಗ್ರಂಥಾಲಯ ಮೇಲ್ವಿಚಾರಕರಿದ್ದು, ತಿಂಗಳಿಗೆ ಕೇವಲ ರೂ. 2,500 ಗೌರವಧನದಲ್ಲಿ ದಿನಕ್ಕೆ ಎಂಟು ಗಂಟೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಈ ಸಮಸ್ಯೆಯನ್ನು ಮಾನವೀಯ ದೃಷ್ಟಿಯಿಂದ ನೋಡಬೇಕು.

ಬಜೆಟ್ನಲ್ಲಿ ಕನಿಷ್ಠ ವೇತನಕ್ಕೆ ಹಣ ತೆಗೆದಿರಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಸ್. ಸುರೇಶ್ಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.