ಮಂಗಳವಾರ, ಮೇ 11, 2021
28 °C

ಗ್ರಾ.ಪಂ. ಉಪ ಚುನಾವಣೆ: ಅಭ್ಯರ್ಥಿಗಳ ಪ್ರಚಾರ ಬಿರುಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಸೋಮವಾರ ಹಲವು ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದು, ಪ್ರಚಾರ ಕಾರ್ಯ ಬಿರುಸುಗೊಳಿಸಿದ್ದಾರೆ.ತಾಲ್ಲೂಕಿನ ಕನ್ನೇಗಾಲ ಗ್ರಾ.ಪಂ.ಗೆ  ಕಾಂಗ್ರೆಸ್ ಬೆಂಬಲಿತ ಜೆ.ಎಲ್. ಜಯರಾಂ ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ  ಆಯ್ಕೆ ನಡೆದಿದೆ.ಬೇಗೂರಿನ 1ನೇ ಬ್ಲಾಕ್‌ಗೆ ಕಾಂಗ್ರೆಸ್ ಬೆಂಬಲಿತ ಪುಟ್ಟಸ್ವಾಮಿ, ಬಿಜೆಪಿ ಬೆಂಬಲಿತ ಮಹಾದೇವ ಹಾಗೂ ಸದಾನಂದ ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕಾಟಿ ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಮಹೇಶ್, ಬಿಜೆಪಿ ಬೆಂಬಲಿತ ಚಂದ್ರಶೇಖರ್, ಶಿವಣ್ಣ, ಅಣ್ಣೂರು ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಪಿಣ್ಣಮ್ಮ ಹಾಗೂ ಬಿಜೆಪಿ ಬೆಂಬಲಿತ ಮುತ್ತಮ್ಮ ನಾಮಪತ್ರ ಸಲ್ಲಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.