ಶನಿವಾರ, ಮೇ 15, 2021
24 °C

ಗ್ರಾ.ಪಂ. ನೌಕರರ ಅನಿರ್ದಿಷ್ಟಾವಧಿ ಧರಣಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು: ಪರಿಷ್ಕೃತ ವೇತನ ಬಿಡುಗಡೆಗೆ ಆಗ್ರಹಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಗುರುವಾರ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.ಪರಿಷ್ಕೃತ ವೇತನ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶ ನೀಡಿ ಹಲವು ತಿಂಗಳುಗಳೇ ಕಳೆದರೂ ಇನ್ನೂ ವೇತನ ಬಿಡುಗಡೆಗೆ ಗ್ರಾ.ಪಂ. ಗಳು ಮುಂದಾಗಿಲ್ಲ. ಪ್ರತಿ ತಿಂಗಳು ವೇತನ ವಿಳಂಬವಾಗುತ್ತಿದೆ ಎಂದು ದೂರಿದ ಸದಸ್ಯರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಓಗಳ ವಿರುದ್ಧ ಘೋಷಣೆ ಕೂಗಿದರು.ಗ್ರಾ.ಪಂ. ಸಿಬ್ಬಂದಿಗೆ ಪ್ರತ್ಯೇಕ ಖಾತೆ ತೆರೆದು ವೇತನ ನೀಡಬೇಕು. ನಿಗದಿ ಮಾಡಿರುವ ತುಟ್ಟಿಭತ್ಯೆಯನ್ನು ಶೀಘ್ರ ಬಿಡುಗಡೆಗೊಳಿಸಬೇಕು. ಕನಿಷ್ಠ ವೇತನ ನಿಗದಿ ಸೇರಿದಂತೆ ಗ್ರಾ.ಪಂ. ನೌಕರರನ್ನು ಕಾಯಂಗೊಳಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.ಸಿಐಟಿಯು ಜಿಲ್ಲಾಧ್ಯಕ್ಷ ಜಿ.ರಾಮಕೃಷ್ಣ, ಉಪಾಧ್ಯಕ್ಷರಾದ ಸಿದ್ದೇಗೌಡ, ಅನಿತಾ, ತಾಲ್ಲೂಕು ಅಧ್ಯಕ್ಷ ಪ್ರದೀಪ್, ಗ್ರಾ.ಪಂ. ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಶಿವರಾಂ, ಕಾರ್ಯದರ್ಶಿ ಜಿ.ಆರ್.ರಾಮು, ಸದಸ್ಯರಾದ ಅನಿಲ್‌ಕುಮಾರ್, ಶಿವಕುಮಾರ್, ಜಯರಾಂ, ಸುರೇಶ್, ಜಿಲ್ಲಾ ಸಂಘದ ರಾಜಣ್ಣ, ಸಿ.ಕೃಷ್ಣ, ಉಷಾ, ನಿರ್ಮಲ, ಪವಿತ್ರ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.