ಗುರುವಾರ , ಮೇ 19, 2022
24 °C

ಗ್ರಾ.ಪಂ. ನೌಕರರ ಧರಣಿ 6ನೇ ದಿನಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕನಿಷ್ಠ ವೇತನ ಹತ್ತು ಸಾವಿರ ರೂಪಾಯಿ ಜಾರಿ, ಉದ್ಯೋಗ ಕಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಮಂಗಳವಾರ ಐದನೇ ದಿನಕ್ಕೆ ಕಾಲಿಟ್ಟಿದೆ.ಕೆಲ ತಿಂಗಳ ಹಿಂದೆ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಕೈಗೊಂಡಾಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಭರವಸೆ ನೀಡಿದರು. ಆದರೆ ಭರವಸೆ ಈಡೇರದ ಹಿನ್ನೆಲೆಯಲ್ಲಿ ಮತ್ತೆ ಧರಣಿ ಕೈಗೊಂಡಿದ್ದೇವೆ. ನಮ್ಮ ಬೇಡಿಕೆ ಈಡೇರಿಸುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರು ಮತ್ತು ಜನಸಾಮಾನ್ಯರ ಪರ ಬಜೆಟ್ ಮಂಡಿಸಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ ಅಸಂಘಟಿತ ವಲಯದ ಕಾರ್ಮಿಕರ ಉದ್ಯೋಗ ಭದ್ರತೆ ಮತ್ತು ಯಾವುದೇ ಮಹತ್ವದ ಯೋಜನೆ ಘೋಷಿಸಿಲ್ಲ ಎಂದರು.ಸಂಘದ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಂದ ಖಚಿತ ಭರವಸೆ ಸಿಗುವವರೆಗೆ ನಾವು ಹೋರಾಟವನ್ನು ಕಾರಣಕ್ಕೂ ಕೈಬಿಡುವುದಿಲ್ಲ ಎಂದರು. ಸಂಘದ ಮುಖಂಡರಾದ ಸಿದ್ದಗಂಗಪ್ಪ, ಚನ್ನರಾಯಪ್ಪ, ಸುದರ್ಶನ, ಮುನಿತಿಮ್ಮಯ್ಯ, ವೆಂಕಟರಾಮಯ್ಯ, ವೆಂಕಟೇಶ್, ಮೂರ್ತಿ ಮತ್ತಿತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.