ಗ್ರಾ.ಪಂ. ನೌಕರರ ಪ್ರತಿಭಟನೆ

ಗುರುವಾರ , ಜೂಲೈ 18, 2019
28 °C

ಗ್ರಾ.ಪಂ. ನೌಕರರ ಪ್ರತಿಭಟನೆ

Published:
Updated:

ಚಿಕ್ಕಬಳ್ಳಾಪುರ: ಕನಿಷ್ಠ ವೇತನ ನಿಗದಿ, ಉದ್ಯೋಗ ಕಾಯಂಗೊಳಿಸುವುದು, ನಿಯಮಿತ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುವ ಮುನ್ನ ಧರಣಿ ನಡೆಸಿದ ಗ್ರಾಮ ಪಂಚಾಯಿತಿ ನೌಕರರು, ~ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು~ ಎಂದು ಒತ್ತಾಯಿಸಿದರು.ಸಿಐಟಿಯು ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ~ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ~ ಎಂದು ಆರೋಪಿಸಿದರು.~ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಪ್ರತಿಭಟನಾ ಸಮಾವೇಶಗಳನ್ನು ನಡೆಸಿ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿಪತ್ರ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕನಿಷ್ಠ ವೇತನ ನಿಗದಿಪಡಿಸಿಲ್ಲ, ಉದ್ಯೋಗ ಭದ್ರತೆ ನೀಡಲಾಗಿಲ್ಲ. ಇಂಥ ಸಂಕಷ್ಟ ಪರಿಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ನೌಕರರು ಜೀವನ ನಡೆಸುವುದು ಕಷ್ಟಕರವಾಗಿದೆ. ಕುಟುಂಬ ನಿರ್ವಹಿಸುವುದು ಹೇಗೆ?~ ಎಂದು ಅವರು ಪ್ರಶ್ನಿಸಿದರು. ಸಂಘದ ಮುಖಂಡರಾದ ಬಾಲು, ಎ.ಎಲ್.ನರಸಿಂಹಮೂರ್ತಿ, ಮಂಜುನಾಥ್, ಪ್ರಕಾಶ್ ಕೃಷ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry