ಗ್ರಾ.ಪಂ. ನೌಕರರ ಹಿತ ಕಡೆಗಣನೆ: ಆರೋಪ

7

ಗ್ರಾ.ಪಂ. ನೌಕರರ ಹಿತ ಕಡೆಗಣನೆ: ಆರೋಪ

Published:
Updated:

ಹಾಸನ: `ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಇದರಿಂದ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿದೆ' ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ನಾಡಗೌಡ ವಿಷಾದ ವ್ಯಕ್ತಪಡಿಸಿದರು.ನಗರದ ಸಿ.ಐ.ಟಿ.ಯು ಜಿಲ್ಲಾ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ನೌಕರರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, `ರಾಜ್ಯದಲ್ಲಿ ಆಡಳಿತಕ್ಕೆ  ಬಂದ ಎಲ್ಲ ಸರ್ಕಾರಗಳೂ ಗ್ರಾಮ ಪಂಚಾಯಿತಿ ನೌಕರರ ಹಿತ ಕಾಪಾಡುವಲ್ಲಿ ವಿಫಲವಾಗಿವೆ. ನಿರ್ದಿಷ್ಟ ವೇತನ ಮತ್ತು  ಮೂಲಭೂತ ಸೌಲಭ್ಯ ಸೇರಿದಂತೆ ಹತ್ತು ಹಲವು ಸಮಸ್ಯೆಗಳನ್ನು ನಿವಾರಿಸದೆ ನೌಕರರನ್ನು ಗುಲಾ ಮರಂತೆ ಕಾಣುತ್ತಿದೆ. ನೌಕರರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರೂ ಸರ್ಕಾರ ಗಮನಹರಿಸದೆ ತನ್ನ ಹಿತ ಕಾಯ್ದುಕೊಳ್ಳುತ್ತಿದೆ' ಎಂದು ಆರೋಪಿಸಿದರು.`ಗ್ರಾಮ ಪಂಚಾಯಿತಿ ನೌಕರರನ್ನು ಸಂಘಟಿಸುವ ಉದ್ದೇಶದಿಂದ ರಾಜ್ಯದ 30 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘಟನೆಗಳನ್ನು ಅರಂಭಿಸಲಾಗುತ್ತಿದೆ. ಕನಿಷ್ಠ ವೇತನ, ಕೆಲಸ ಕಾಯಮಾತಿ, ಬಡ್ತಿ, ಹೊರಗುತ್ತಿಗೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಿಕೊಳ್ಳುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು' ಎಂದು ಅವರು ತಿಳಿಸಿದರು.  ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಧರ್ಮೇಶ್, ಸಿ.ಐ.ಟಿ.ಯು ಜಿಲ್ಲಾ ಘಟಕದ ಅಧ್ಯಕ್ಷ ವಿ. ಸುಕುಮಾರ್, ಖಜಾಂಚಿ ಕೆ.ಟಿ. ಹೊನ್ನೇಗೌಡ ನೌಕರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry