ಗುರುವಾರ , ಮೇ 26, 2022
30 °C
ಸದಸ್ಯತ್ವ ರದ್ದು ಮಾಡಲು ದಸಂಸ ಮನವಿ

ಗ್ರಾ.ಪಂ ಸದಸ್ಯನಿಂದ ಹಲ್ಲೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿಡಪನಕುಂಟೆ ಗ್ರಾಮ ಪಂಚಾಯ್ತಿ ಸದಸ್ಯ ಮಂಜಪ್ಪ ಎನ್ನುವವರು ತಿಪ್ಪೇರುದ್ರಪ್ಪ ಎನ್ನುವವರ ಮೇಲೆ ಉದ್ಯೋಗ ಖಾತ್ರಿ ಕೂಲಿ ಹಣ ವಾಪಸ್ ನೀಡುವಂತೆ ಹಲ್ಲೆ ನಡೆಸಿದ್ದು, ಅವರ ಸದಸ್ಯತ್ವ ರದ್ದುಪಡಿಸಬೇಕು ಎಂದು ಒತ್ತಾಯಿಸಿ, ದಲಿತ ಸಂಘರ್ಷ ಸಮಿತಿ (ಟಿಡಿಆರ್ ಬಣ) ವತಿಯಿಂದ ಮಂಗಳವಾರ ತಾಲ್ಲೂಕು ಪಂಚಾಯ್ತಿ ಕಚೇರಿ ವ್ಯವಸ್ಥಾಪಕ ಮೈಲಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ತಿಪ್ಪೇರುದ್ರಪ್ಪ ಮಾತನಾಡಿ, `ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನನಗೆ ಉದ್ಯೋಗ ಪತ್ರ ನೀಡಲಾಗಿತ್ತು. ಕೂಲಿ ಮಾಡಿದ ಹಣ ಮೀರಾಸಾಬಿಹಳ್ಳಿಯ ಪ್ರಗತಿ ಗ್ರಾಮೀಣ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿತ್ತು.

ಕೂಲಿ ಹಣ ಬಿಡಿಸಿಕೊಂಡಿದ್ದರಿಂದ ಸಿಟ್ಟಿಗೆದ್ದ ಪಂಚಾಯ್ತಿ ಸದಸ್ಯ ಮಂಜಪ್ಪ, ಹಣ ವಾಪಸ್ ನೀಡು ಎಂದು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ' ಎಂದು ದೂರಿದರು.ಮನವಿ ಸ್ವೀಕರಿಸಿ ಮಾತನಾಡಿದ ಮೈಲಾರಪ್ಪ, ಈ ಕುರಿತು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಕೆ.ಬಿ.ನಾಗರಾಜ, ತಿಮ್ಮಪ್ಪ, ತಿಪ್ಪೇರುದ್ರಪ್ಪ, ಹೊನ್ನೂರಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.