ಶನಿವಾರ, ಮೇ 28, 2022
25 °C

ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ಕೀಟಜನ್ಯ ರೋಗಗಳು ಬಾರದಂತೆ ನಿಯಂತ್ರಿಸಬೇಕಾದರೆ ಸುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಅಗತ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶಿ ಹೇಳಿದರು.

ಇಲ್ಲಿನ ಸಾಮರ್ಥ್ಯಸೌಧದಲ್ಲಿ ಸೋಮವಾರ ಏರ್ಪಡಿಸಿದ್ದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಡೆಂಗೆಜ್ವರ, ಮಲೇರಿಯಾ ಮತ್ತಿತರೆ ರೋಗಗಳ ನಿಯಂತ್ರಣ ಕುರಿತು ಅವರು ಉಪನ್ಯಾಸ ನೀಡಿದರು.

ನಿಂತ ನೀರು, ತ್ಯಾಜ್ಯ ವಸ್ತುಗಳಿಂದ ತುಂಬಿಕೊಂಡಿರುವ ಚರಂಡಿ, ಮನೆಯ ಸುತ್ತಲಿನ ಪ್ರದೇಶದಲ್ಲಿ ಬಿದ್ದಿರುವ ಘನತ್ಯಾಜ್ಯ ವಸ್ತುಗಳು ಸೊಳ್ಳೆಗಳನ್ನು ಉತ್ಪತ್ತಿ ಮಾಡುವ ಕಾರ್ಖಾನೆಗಳಿದ್ದಂತೆ ಎಂದು ತಿಳಿಸಿದರು.

ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವ ಜತೆಗೆ ತ್ಯಾಜ್ಯವಸ್ತುಗಳನ್ನು ಸೂಕ್ತ ಸ್ಥಳಕ್ಕೆ ಹಾಕುವ ಮೂಲಕ, ಮಾರಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ವೇದಮೂರ್ತಿ ಮಾತನಾಡಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಕೀಟಜನ್ಯ ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಜತೆಗೆ ಗ್ರಾಮಸ್ಥರಲ್ಲಿಯೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.