ಗುರುವಾರ , ಮೇ 26, 2022
22 °C

ಗ್ರಾಮಗಳ ಕಾಳಜಿ: ವಿದ್ಯಾರ್ಥಿಗಳಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಶಿಬಿರದಲ್ಲಿ ಪಡೆದ ಸೇವಾ ಮನೋಭಾವವನ್ನು ವಿದ್ಯಾರ್ಥಿ ಜೀವನದ ನಂತರವೂ ಮುಂದುವರಿಸಿಕೊಂಡು ಉನ್ನತ ಹುದ್ದೆಗೆ ಏರಿದಾಗ ಹಳ್ಳಿಯ ವ್ಯವಸ್ಥೆ ಸರಿಪಡಿಸಲು ಕಾಳಜಿ ವಹಿಸಬೇಕು ಎಂದು ಸಚಿವ ಬಿ.ಎನ್.ಬಚ್ಚೇಗೌಡ ಶನಿವಾರ ಹೇಳಿದರು.ತಾಲ್ಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ನಡೆಸಿದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.ಜಿಲ್ಲಾ ಪಂಚಾಯಿತಿ ಸದಸ್ಯ ತಿರುವರಂಗ ನಾರಾಯಣ ಸ್ವಾಮಿ ಮಾತನಾಡಿದರು. ಪ್ರಾಂಶುಪಾಲರಾದ ಪ್ರೊ.ಸರೋಜಿನಿ ಕೆ.ಮಲ್ಹಾರಿ ಅಧ್ಯಕ್ಷತೆ ವಹಿಸಿದ್ದರು.ಒಂದು ವಾರ ನಡೆದ ಶಿಬಿರದಲ್ಲಿ ಮಹಿಳೆಯರಿಗೆ ಕ್ಯಾಂಡಲ್ ತಯಾರಿಕೆ ತರಬೇತಿ, ಗ್ರಾಮ ಸ್ವಚ್ಛತೆ, ಗಿಡ ನೆಡುವ ಕಾರ್ಯವನ್ನು 80 ವಿದ್ಯಾರ್ಥಿನಿಯರು ನಡೆಸಿದರು ಎಂದು ವರದಿ ಓದಿದ ವಿದ್ಯಾರ್ಥಿನಿ ಆಶಾ ತಿಳಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ವೈ.ಕೃಷ್ಣಪ್ಪ, ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ರಾಣಿ, ಮಮತಾ, ಸಿಪಿಐ ಎಂ.ಮಲ್ಲೇಶ್, ಶಿಬಿರಾಧಿಕಾರಿಗಳಾದ ಎ.ಗೀತಾ, ಆರ್.ಪುಷ್ಪಲತಾ ಭಾಗವಹಿಸಿದ್ದರು. ಉಪನ್ಯಾಸಕ ಎಸ್.ಗೋವಿಂದಪ್ಪ ವಂದಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.