ಬುಧವಾರ, ಏಪ್ರಿಲ್ 14, 2021
23 °C

ಗ್ರಾಮಾಂತರಕ್ಕೆ ಕುಡಿಯುವ ನೀರು ಪೂರೈಕೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ತಾ.ಪಂ. ಅಧ್ಯಕ್ಷೆ ಉಮಾದೇವಿ ಸೂಚಿಸಿದರು.ತಾ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು.



ಅನುದಾನಕ್ಕೆ ಯಾವುದೇ ಕೊರತೆ ಇಲ್ಲ.  ಕೆಲವೆಡೆ ಟ್ರಾನ್ಸ್‌ಫಾರ್ಮರ್‌ಗಳ ಕೊರತೆ ಇದೆ. ಕೆಲವೆಡೆ ಟ್ರಾನ್ಸ್‌ಫಾರ್ಮರ್‌ಗಳು ಕೆಟ್ಟಿದ್ದು, ಕೂಡಲೇ ಅವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. 



ನಿಗಧಿತ ಅವಧಿಯೊಳಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕು.  ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ನೀಡಲು ಇಲಾಖೆ ಮುಂದಾಗಬೇಕು. ಕಡಿಮೆ ಫಲಿತಾಂಶ ಬಂದ ಶಾಲೆಗಳನ್ನು ಗುರುತಿಸಿ ಕಾರಣ ಕಂಡುಕೊಳ್ಳಬೇಕು. ಎಂದು ಉಪಾಧ್ಯಕ್ಷ ಹನುಮಂತಪ್ಪ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.